ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ನೇಮಕ
ಗುಲ್ಬರ್ಗ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಪರಶುರಾಮ ನಸಲವಾಯಿ ಅಧ್ಯಕ್ಷತೆಯಲ್ಲಿ ಯುವ ಮೋರ್ಚಾ ಗುಲ್ಬರ್ಗ ಗ್ರಾಮಾಂತರ ಜಿಲ್ಲೆಯ ಕಾರ್ಯಕಾರಿಣಿ ನಡೆಯಿತು.
ಸಭೆಯಲ್ಲಿ ಜಿಲ್ಲೆಯ 8 ಮಂಡಲಗಳಲ್ಲಿ ಮಂಡಲ ಕಾರ್ಯಕಾರಿಣಿ ದಿನಾಂಕಗಳನ್ನು ಹಾಗೂ 8 ಮಂಡಲಗಳಲ್ಲಿ ಬಿಜೆಪಿ ಸಂಸ್ಥಾಪಕ ಡಾ. ಶಾಂಪ್ರಸಾದ್ ಮುಖರ್ಜಿ ಹುಟ್ಟುಹಬ್ಬದದಿಂದ ಜೂ.26ರ ಕಾರ್ಗಿಲ್ ಹುತಾತ್ಮರ ದಿನದವರೆಗೂ ಹಮ್ಮಿಕೊಂಡ 'ಹಸಿರು ಪರಿಸರ'ಕ್ಕಾಗಿ ಸಸಿ ನೆಡುವ ಕಾರ್ಯಕ್ರಮದ ದಿನಾಂಕಗಳನ್ನು ನಿಗದಿಪಡಿಸಿ ಮತ್ತು 8 ಮಂಡಲಗಳ ಪ್ರಭಾರಿಗಳನ್ನಾಗಿ ಯುವ ಮೋರ್ಚಾ ಜಿಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣಿ, ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಮುಕುಂದ ದೇಶಪಾಂಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ತಳವಾರ ಯುವ ಮೋರ್ಚಾ ಜಿಲ್ಲಾ ಪ್ರಭಾರಿ ಸಂಜಯ ಮಿಸ್ಕಿನ್ ಎಲ್ಲರೂ ಕಾರ್ಯಕರ್ತರಿಗೆ ಸಂಘಟನಾತ್ಮಕ ಮಾರ್ಗದರ್ಶನ ನೀಡಿದರು. ಮಾಜಿ ಸಚಿವ ರೇಪುನಾಯಕ ಬೆಳಮಗಿ, ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಯುವ ಮೋರ್ಚಾ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

