ಕುರಿ ಕಳ್ಳತನ ತಡೆಗೆ ಒತ್ತಾಯಿಸಿ ಕುರಿಗಾರರ ಮನವಿ
ಸಿಂಧನೂರು: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕುರಿ ಕಳ್ಳತನ ತಪ್ಪಿಸಲು ಸೂಕ್ತ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಒತ್ತಡ ಹೇರಬೇಕೆಂದು ಮಾಜಿ ಸಂಸದ ಕೆ. ವಿರೂಪಾಕ್ಷಪ್ಪರಿಗೆ ಕುರಿಗಾರರು ಮನವಿ ಸಲ್ಲಿಸಿದರು.
ಪ್ರತಿ ವರ್ಷ ಡಿಸೆಂಬರ್ ಮತ್ತು ಮಾರ್ಚ್ನಲ್ಲಿ ಬತ್ತ ಕಟಾವು ಆದ ಸಮಯದಲ್ಲಿ ಬೆಳಗಾವಿ, ಬಿಜಾಪುರ, ಗುಲ್ಬರ್ಗಾ ಮತ್ತು ಆಂಧ್ರದ ಗಡಿ ಭಾಗದಿಂದ ಕುರಿಗಾರರು ತಮ್ಮ ಕುರಿ ಮೇಯಿಸಲು ಈ ಭಾಗಕ್ಕೆ ಬರುತ್ತಿದ್ದಾರೆ. ಕಳೆದ ಜನವರಿಯಿಂದ ಕಳ್ಳರ ಕಾಟ ವಿಪರೀತವಾಗಿದ್ದು, ರಾತ್ರಿ ವೇಳೆ ಬರುವ ಕಳ್ಳರು ಕಲ್ಲು, ಬಡಿಗೆ ಇತರೆ ಆಯುಧಗಳಿಂದ ಕುಟುಂಬದವರನ್ನು ಬೆದರಿಸಿ ಕುರಿಗಳನ್ನು ಕದ್ದೊಯುತ್ತಿದ್ದಾರೆ ಎಂದು ತಿಳಿಸಿದರು.
ಕುರಿಗಾರರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಕುರಿ ಕಳ್ಳತನ ಪ್ರಕರಣಗಳನ್ನು ತಡೆಯಲು ಅಗತ್ಯ ಕ್ರಮಕ್ಕೆ ಒತ್ತಾಯಿಸಬೇಕೆಂದು ಕುರಿಗಾರರು ಮನವಿ ಮಾಡಿದರು.
ಈ ಬಗ್ಗೆ ಎಸ್ಪಿ ಗಮನಕ್ಕೆ ತಂದು ಕಳ್ಳರ ಪತ್ತೆ, ಕುರಿಗಾರರ ರಕ್ಷಣೆ ಬಗ್ಗೆ ಸೂಕ್ತ ಕ್ರಮಕ್ಕೆ ಮನವಿ ಮಾಡಲಾಗುವುದೆಂದು ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

