ಸಿಂಧನೂರು: ನಗರಸಭೆಯ ವಿವಿಧ ಯೋಜನೆಗಳಲ್ಲಿ ಲಭ್ಯವಿರುವ ಅನುದಾನಗಳನ್ನು ಬಳಸಿಕೊಂಡು ಸ್ಮಾರ್ಟ್ ವಾರ್ಡ್ ನಿರ್ಮಾಣಕ್ಕೆ ಬದ್ಧವಾಗಿದ್ದು, ಇದಕ್ಕೆ ನಿವಾಸಿಗಳು ಸಹಕರಿಸಬೇಕು ಎಂದು ವಾರ್ಡ್ ನಂ.6ರ ನಗರಸಭೆ ಸದಸ್ಯ ಹಾಜಿ ಮಸ್ತಾನ್ ಮನವಿ ಮಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ವಾರ್ಡ್ನಲ್ಲಿ ರಸ್ತೆ, ಚರಂಡಿ, ವಿದ್ಯುತ್ ದೀಪ, ಶೌಚಾಲಯ ಮುಂತಾದ ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು.