ರಾಯಚೂರು

ಕ್ರೀಡೆಗಳು ಸ್ಪರ್ಧಾತ್ಮಕ ಆಗಿರಲಿ: ಮಹಾಮುನಿಯಪ್ಪ

Published On :

ಮುದಗಲ್: ಕ್ರೀಡಾಕೂಟಗಳು ಸ್ಪರ್ಧಾತ್ಮಕವಾಗಿರಬೇಕು. ಅಂದಾಗಲೇ ಪ್ರತಿಭೆಗಳನ್ನು ಗುರುತಿಸಲು ಸಾಧ್ಯ ಎಂದು ಶಿಕ್ಷಣ ಸಂಯೋಜಕ ಮಹಾಮುನಿಯಪ್ಪ ಹೇಳಿದರು. ತುರಡಗಿ ಗ್ರಾಮದಲ್ಲಿ ಬನ್ನಿಗೋಳ, ಆಮದಿಹಾಳ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಮತ್ತು ಶೈಕ್ಷಣಿಕ ಆಸಕ್ತಿಯನ್ನು ಹೆಚ್ಚಿಸುತ್ತದೆ. ಆದ್ದರಿಂದ ಸರ್ಕಾರ ವಲಯ ಮಟ್ಟದಲ್ಲಿ ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಿದೆ. ಅಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿರುವ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ. ವಲಯ ಮಟ್ಟದಿಂದ ತಾಲೂಕು, ಜಿಲ್ಲಾ, ವಿಭಾಗ ಮತ್ತು ರಾಜ್ಯ, ರಾಷ್ಟ್ರಮಟ್ಟದವರೆಗೆ ಮಕ್ಕಳು ಪ್ರತಿಭೆಯನ್ನು ಗುರುತಿಸುವಂತಾಗಲಿ ಎಂದರು. ಕಾರ್ಯಕ್ರಮವನ್ನು ತಾಪಂ ಅಧ್ಯಕ್ಷ ರುದ್ರಗೌಡ ಪಾಟೀಲ್ ತುರಡಗಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ವೀರನಗೌಡ ವಹಿಸಿದ್ದರು. ಕ್ರೀಡಾ ಜ್ಯೋತಿಯನ್ನು ಮುಖಂಡರಾದ ವಿರುಪಾಕ್ಷಪ್ಪ ಸಾಹುಕಾರ ಸ್ವೀಕರಿಸಿದರು. ಕ್ರೀಡಾ ಧ್ವಜಾರೋಹಣವನ್ನು ನಾಗನಗೌಡ ತುರಡಗಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಡಾ. ಸುರೇಶ, ವೀರಭದ್ರಗೌಡ ತುರಡಗಿ, ಗ್ರಾಪಂ ಸದಸ್ಯ ನೀಲಪ್ಪಗೌಡ, ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ಶಿಕ್ಷಣ ಸಂಯೋಜನಕ ಬಸವರಾಜ ಹಿರೇಮಠ, ಗಂಗನಗೌಡ ವಂದಾಲಿ, ಶಿಕ್ಷಣ ಸಂಯೋಜನಕರು, ದೈಹಿಕ ಶಿಕ್ಷಕರು ಭಾಗವಹಿಸಿದ್ದರು.  


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.