ನಂದವಾಡಗಿ ಏತ ನೀರಾವರಿ ಜಾರಿಗೆ ಮುರಾರಿ ಒತ್ತಾಯ
ಲಿಂಗಸ್ಗೂರು: ಜಿಲ್ಲಾ ವ್ಯಾಪ್ತಿ ಜಮೀನುಗಳಿಗೆ ನೀರಾವರಿ ಕಲ್ಪಿಸಲು, ಶಾಶ್ವತ ಕುಡಿಯುವ ನೀರು ಪೂರೈಕೆಗೆ ಹಾಗೂ ಕೆರೆಗಳ ಭರ್ತಿಗೆ ನಂದವಾಡಗಿ ಏತ ನೀರಾವರಿ ಯೋಜನೆ ಶೀಘ್ರ ಜಾರಿ ಅಗತ್ಯ ಎಂದು ಜಿಪಂ ಸದಸ್ಯ, ನಂದವಾಡಗಿ ಏತನೀರಾವರಿ ಹೋರಾಟ ಸಮಿತಿ ಮುಖಂಡ ಎಚ್.ಬಿ. ಮುರಾರಿ ಒತ್ತಾಯಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆ ಜಾರಿಗೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬರಲಾಗಿದೆ. ಅಲ್ಲದೆ ಇತ್ತೀಚೆಗೆ ಜು.3ರಂದು ಸಂಸದ ಬಿ.ವಿ. ನಾಯಕ, ಶಾಸಕರಾದ ಪ್ರತಾಪಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಭೋಸರಾಜ್, ಶರಣಪ್ಪ ಮಟ್ಟೂರು, ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ ಸೇರಿದಂತೆ ಹೋರಾಟ ಸಮಿತಿ ಮುಖಂಡರ ಜೊತೆಗೂಡಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಯೋಜನೆ ಜಾರಿಗೊಳಿಸುವಂತೆ ಮನವಿ ಮಾಡಲಾಗಿದೆ ಎಂದರು.
ಇದಕ್ಕೆ ಮುಖ್ಯಮಂತ್ರಿಗಳು ನೀರಾವರಿ ಸಚಿವರಿಗೆ ಹಾಗೂ ಕೃಷ್ಣಾ ಭಾಗ್ಯ ಜಲನಿಗಮ ವ್ಯವಸ್ಥಾಪಕ ನಿರ್ದೇಶಕರಿಗೆ ನಂದವಾಡಗಿ ಏತನೀರಾವರಿ ಯೋಜನೆ ಜಾರಿಗೆ ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದಾರೆ.
ನಂದವಾಡಗಿ ಹೋರಾಟ ಸಮಿತಿ, ಸಂಘ-ಸಂಸ್ಥೆಗಳ ಹೋರಾಟ ಹಾಗೂ ಜನಪ್ರತಿನಿಧಿಗಳ ಇಚ್ಛಾಸಕ್ತಿಯ ಫಲವಾಗಿ ನಂದವಾಡಗಿ ಯೋಜನೆ ಜಾರಿಗೆ ಹಸಿರು ನಿಶಾನೆ ದೊರೆತಿದ್ದು, ನೀರು ಹಂಚಿಕೆ ಕುರಿತ ತಾಂತ್ರಿಕ ತೊಂದರೆಗಳಿದ್ದರೆ ನಿವಾರಿಸಿ ಯೋಜನೆ ವ್ಯಾಪ್ತಿಯ ಎಲ್ಲ ಹಳ್ಳಿಗಳಿಗೆ ನೀರಾವರಿ, ಆರ್ಸೆನಿಕ್, ಫ್ಲೋರೈಡ್ ಅಂಶವುಳ್ಳ ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಹಾಗೂ 25 ಕೆರೆಗಳ ಭರ್ತಿಯಾಗುವ ರೀತಿಯಲ್ಲಿ ಯೋಜನೆ ಜಾರಿಯಾಗಬೇಕೆಂಬುದು ಹೋರಾಟ ಸಮಿತಿ ಒತ್ತಾಸೆಯಾಗಿದೆ ಎಂದರು.
ಈ ವೇಳೆ ಹೋರಾಟ ಸಮಿತಿ ಮುಖಂಡರಾದ ಸಿದ್ಧರಾಮಪ್ಪ ಸಾಹುಕಾರ, ರಮೇಶ ಶಾಸ್ತ್ರಿ, ಶರಣಗೌಡ ಬಸ್ಸಾಪೂರ, ಶಿವಕುಮಾರ ಗುಡಿಹಾಳ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

