ನೂತನ ಸಮಿತಿ ಸದಸ್ಯರಿಗೆ ಸ್ವಾಗತ

Updated on: 

ರಾಯಚೂರು: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ಬಾಲಕರ- ಬಾಲಕಿಯರ ಬಾಲಮಂದಿರಗಳ ಸಹಯೋಗದಲ್ಲಿ 2014ರಿಂದ 2017ರವರೆಗಿನ ಅವಧಿಗೆ ಹೊಸದಾಗಿ ರಚಿಸಿದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಮಕ್ಕಳ ನ್ಯಾಯ ಮಂಡಳಿಗಳ ಅಧ್ಯಕ್ಷ ಹಾಗೂ ಸದಸ್ಯರಿಗೆ ಇತ್ತೀಚೆಗೆ ನಗರದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಲಕ್ಷ್ಮೀಕಾಂತಮ್ಮ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಾಂಜಿನೇಯ ಆಗಮಿಸಿದ್ದರು. ಹೊಸದಾಗಿ ಸಮಿತಿಗಳಿಗೆ ಆಯ್ಕೆಯಾದ ಅಧ್ಯಕ್ಷರು, ಮತ್ತು ಸದಸ್ಯರು, ಬಾಲಮಂದಿರದ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಕನಕದಾಸ ಅನಾಥಾಶ್ರಮದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಆರ್ಟಿಪಿಎಸ್‌ನ 2 ಘಟಕ ಸ್ಥಗಿತ


ರಾಯಚೂರು: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 4 ಮತ್ತು 8ನೇ ಘಟಕಗಳು ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿವೆ.
ಕೇಂದ್ರದ ನಾಲ್ಕನೇ ಘಟಕವನ್ನು ವಾರ್ಷಿಕ ದುರಸ್ತಿ ಹಿನ್ನೆಲೆ ಸ್ಥಗಿತಗೊಳಿಸಲಾಗಿದೆ. 8ನೇ ಘಟಕವನ್ನು ವಿದ್ಯುತ್ ಬೇಡಿಕೆಯ ಕೊರತೆ ಹಿನ್ನೆಲೆ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಇನ್ನುಳಿದಂತೆ ಆರು ಘಟಕಗಳಿಂದ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಎಂದು ಆರ್ಟಿಪಿಎಸ್ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com