ರಾಯಚೂರು: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ಮುದ್ರಿತ 141 ಶೀರ್ಷಿಕೆ ಪ್ರತಿಗಳು ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಮಗ್ರ ಬರಹಗಳು ಮತ್ತು ಭಾಷಣಗಳ 14 ಸಂಪುಟಗಳು ಮಾರಾಟಕ್ಕೆ ಲಭ್ಯವಿರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.