ರಾಯಚೂರು: ತಾಲೂಕಿನ ಮಿಡಗಲದಿನ್ನಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥೆಯಿಂದ ವನಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮೂಹ ಸಂಪನ್ಮೂಲ ವ್ಯಕ್ತಿ ಹೀರಾಲಾಲ್ ಅವರು ಸಸಿ ನೆಡುವ ವನ ಮಹೋತ್ಸವಕ್ಕೆ ಚಾಲನೆ ನೀಡಿ, ಪರಿಸರ ಸಂರಕ್ಷಣೆಯತ್ತ ಎಲ್ಲರೂ ಗಮನಹರಿಸಬೇಕಿದೆ. ಪರಿಸರ ಸಂರಕ್ಷಣೆಯಿಂದ ಮಾತ್ರ ಜಗತ್ತಿನ ಉಳಿವು ಸಾಧ್ಯ ಎಂದು ಹೇಳಿದರು. ಸಂಸ್ಥೆಯ ಮೇಲ್ವಿಚಾರಕ ವಿನಾಯಕ ಮಾತನಾಡಿ, ಶಾಲೆಯ ಪರಿಸರ ಉತ್ತಮವಾಗಿರಿಸಿಕೊಳ್ಳುವತ್ತ ಮಕ್ಕಳು ಗಮನಹರಿಸಬೇಕು. ಅದರಿಂದ ಕಲಿಕೆಗೆ ಅನುಕೂಲವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾರಿ ಮುಖ್ಯಗುರು ಸುರೇಶ್ ವಹಿಸಿದ್ದರು. ಸಹಶಿಕ್ಷಕರಾದ ನಾಗರಾಜ್, ಲಕ್ಷ್ಮಿಕಾಂತ್, ಜ್ಯೋತಿ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.