ದೇವದುರ್ಗ: ಕನ್ನಡ ಸಾಹಿತ್ಯ ಪರಿಷತ್ತಿಗೆ ನೂರು ವರ್ಷ ತುಂಬಿದ ಹಿನ್ನೆಲೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಜಿಲ್ಲಾ ಕಸಾಪ ಅಧ್ಯಕ್ಷ ಮಹಾಂತೇಶ ಮಸ್ಕಿ ತಿಳಿಸಿದರು. ಕಸಾಪ ಶತಮಾನೋತ್ಸವದ ಅಂಗವಾಗಿ ಪಟ್ಟಣದ ಬಾಲಕಿಯರ ಸರ್ಕಾರಿ ಶಾಲೆಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪೂರ್ವಭಾವಿ ಸಭೆ ನಡೆಸಿದ್ದು, ಸಲಹೆ ಸೂಚನೆಗಳನ್ನು ಪಡೆದು ಮುಂಬರುವ ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವರ್ಷ ಪೂರ್ತಿ ಶತಮಾನೋತ್ಸವದ ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು. ಎಸ್. ದೇವೇಂದ್ರಗೌಡ, ಎಸ್. ಶರಣೇಗೌಡ, ಸಿಂಧನೂರು ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ, ದೇವದುರ್ಗ ತಾ. ಕಸಾಪ ಅಧ್ಯಕ್ಷ ನರಸಿಂಗರಾವ್ ಸರಕೀಲ್, ಪ್ರಕಾಶ ಅಬಕಾರಿ ಮಾತನಾಡಿದರು. ಲತಾ ದೇವರು, ರಂಗಣ್ಣ ಪಾಟೀಲ್ ಅಳ್ಳುಂಡಿ, ಉಪನ್ಯಾಸಕರಾದ ಮುನಿಯಪ್ಪ ನಾಗೋಲಿ, ಶಂಕರ ಉಭಾಳೆ ಇದ್ದರು.