ರಾಯಚೂರು

ಶಾಲಾ ನೈರ್ಮಲ್ಯ ಶೈಕ್ಷಣಿಕ ಪ್ರವಾಸ ಯಶಸ್ವಿ

Published On :


ರಾಯಚೂರು: ತಾಲೂಕಿನ ಯರಗೇರಾ, ತುಂಟಾಪುರ ಮತ್ತು ಬಿಜನಗೇರಾ ಕ್ಲಸ್ಟರ್‌ನ ಸರ್ಕಾರಿ ಶಾಲೆಗಳ ಶಿಕ್ಷಕರು, ಶಾಲಾ ಮಂತ್ರಿ ಮಂಡಲದ ಸದಸ್ಯರು ಮತ್ತು ಎಸ್‌ಡಿಎಂಸಿ ಸದಸ್ಯರಿಗೆ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥೆಯಿಂದ ಪ್ರವಾಸ ಆಯೋಜಿಸಲಾಗಿತ್ತು. ಮೈಸೂರು ತಾಲೂಕಿನ ಹೆಗ್ಗಡದೇವನಕೋಟೆ ತಾಲೂಕಿನ ಮಾಗುಡಿಲು, ನಂಜನಾಯಕನಹಳ್ಳಿ, ಭೀಮನಹಳ್ಳಿ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಪ್ರವಾಸ ಕರೆದೊಯ್ಯಲಾಗಿತ್ತು. ಮೂರು ದಿನಗಳ ಶೈಕ್ಷಣಿಕ ಪ್ರವಾಸದಲ್ಲಿ ಶಾಲಾ ನೈರ್ಮಲ್ಯ ಹಾಗೂ ಶೈಕ್ಷಣಿಕ ಅಧ್ಯಯನ ಕುರಿತು ಮಾಹಿತಿ ನೀಡಲಾಯಿತು. ಪ್ರವಾಸಕ್ಕೆ ಶಿಕ್ಷಣಾಧಿಕಾರಿ ಬೋರೆಡ್ಡಿ ಚಾಲನೆ ನೀಡಿದರು. ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಅಫ್ರೋಜ್ ಪಾಷಾ, ಯೋಜನಾ ಸಂಯೋಜಕ ಪಿ.ಡಿ.ನಾಯಕ್, ಯರಗೇರಾ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಹೀರಾಲಾಲ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.