ರಾಯಚೂರು

ಟ್ರಾಫಿಕ್ ಠಾಣೆ ಮಂಜೂರಿಗೆ ಸರ್ಕಾರಕ್ಕೆ ಪ್ರಸ್ತಾವ: ಬಾದರ್ಲಿ

Published On :

ಸಿಂಧನೂರು: ಪಟ್ಟಣದ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ಟ್ರಾಫಿಕ್ ಠಾಣೆ ಮಂಜೂರಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರು ತಿಂಗಳೊಳಗೆ ಮಂಜೂರಿಯಾಗಲಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು.
ಪಟ್ಟಣದ ಪೊಲೀಸ್ ಇಲಾಖೆಯ ಸಿಬ್ಬಂದಿ ವಸತಿ ಸಮುಚ್ಚಯ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಠಾಣೆಯನ್ನು ತೆರೆಯಬೇಕು. ಸಿಂಧನೂರು ನಗರದಲ್ಲಿ ಟ್ರಾಫಿಕ್ ಠಾಣೆ ಮಂಜೂರು ಮಾಡುವ ಕುರಿತಾಗಿ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಹೊಸ ಠಾಣೆ ತೆರೆಯುವ ವಿಚಾರ ಹೊಂದಿದ್ದು, ಈ ಪಟ್ಟಿಯಲ್ಲಿ ಸಿಂಧನೂರು ಸಹ ಇದೆ ಎಂದು ಹೇಳಿದರು. ಆರ್ಥಿಕ ಇಲಾಖೆಗೆ ಠಾಣೆ ಮಂಜೂರಿಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಕೆಲವೇ ತಿಂಗಳುಗಳಲ್ಲಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳ್ಳುವ ಭರವಸೆ ಇದೆ. ತುಂಗಭದ್ರಾ ಎಡದಂಡೆ ನಾಲೆಗೆ ಜಾಗೃತಿ ದಳ ನೇಮಕ, ಹೊಸ ಠಾಣೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದರು.
ಆ.12ರಿಂದ ಜಿಲ್ಲೆಯಲ್ಲಿ ಎರಡು ದಿನಗಳ ಮುಖ್ಯಮಂತ್ರಿಗಳ ಪ್ರವಾಸವಿದೆ. ಈ ಸಂದರ್ಭದಲ್ಲಿ ನಗರದ ಜನತೆಗೆ 24 ಗಂಟೆಯೂ ನೀರೊದಗಿಸುವ 56 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದರು. ನಗರಸಭೆ ಅಧ್ಯಕ್ಷ ಜಾಫರ್ ಜಾಗೀರ್‌ದಾರ್, ಮುಖಂಡರಾದ ಕಾಳಿಂಗಪ್ಪ ವಕೀಲ, ಎಸ್.ಜೆ.ಎಸ್.ಆರ್.ವೈ. ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಎಸ್. ಶರಣೇಗೌಡ, ನಗರಸಭೆ ಸದಸ್ಯರಾದ ಶೇಖರಪ್ಪ ಗಿಣಿವಾರ, ಪ್ರಭುರಾಜ ಕರ್ಪೂರಮಠ, ಡಿ.ವೈ.ಎಸ್ಪಿ. ಎಂ.ವಿ. ಸೂರ್ಯವಂಶಿ, ಸಿಪಿಐ ರಮೇಶ ರೊಟ್ಟಿ, ಪಿಎಸ್‌ಐಗಳಾದ ಬಾಳನಗೌಡ, ಎಸ್.ಎನ್. ಪಾಟೀಲ್, ಚಾಮನೂರು ಸೇರಿದಂತೆ ಹಲವರು ಇದ್ದರು.

--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.