ರಾಯಚೂರು

ಒತ್ತುವರಿ ಜಾಗ ತೆರವಿಗೆ ಆಗ್ರಹ

Published On :

ದೇವದುರ್ಗ: ಜಾಲಹಳ್ಳಿಯಲ್ಲಿ ಸರ್ಕಾರಿ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು ಕೂಡಲೇ ತೆರವುಗೊಳಿಸುವಂತೆ ಗ್ರಾಮದ ಪ್ರಗತಿಪರ ಸಂಘಟನೆಗಳ ವೇದಿಕೆ ಒತ್ತಾಯಿಸಿದೆ.  ಸಂಘಟನೆಯ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಜಾಲಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಭೂಮಿಯನ್ನು ಅನೇಕರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಗ್ರಾಮವು ದೊಡ್ಡ ಪಟ್ಟಣವಾಗಿ ಬೆಳೆಯುತ್ತಿದ್ದು, ಈಗಾಗಲೇ ಗ್ರಾಪಂನಿಂದ ಪಟ್ಟಣ ಪಂಚಾಯ್ತಿಗೆ ಮೇಲ್ದರ್ಜೆಗೇರಿಸಲು ಶಿಫಾರಸು ಮಾಡಲಾಗಿದೆ. ಪಟ್ಟಣದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಸರ್ಕಾರಿ ಜಾಗದ ಅವಶ್ಯಕತೆಯಿದ್ದು, ಒತ್ತುವರಿ ಮಾಡಿಕೊಂಡವರನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿದರು. ಈ ಸಂದರ್ಭ ಜಾಲಹಳ್ಳಿ ಗ್ರಾಮದ ಪ್ರಗತಿಪರ ಸಂಘಟನೆಗಳ ವೇದಿಕೆಯ ಮುಖಂಡರಾದ ನರಸಣ್ಣ ನಾಯಕ, ಭೀಮಣ್ಣ ಗುಮೇದಾರ, ಎನ್. ಲಿಂಗಪ್ಪ, ಗ್ರಾಪಂ, ಮಾಜಿ ಅಧ್ಯಕ್ಷ ರಂಗಣ್ಣ ಕೋಲ್ಕಾರ, ರಂಗನಾಥ ಚಿಕ್ಕಲ್ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.