ಲೈಂಗಿಕ ದೌರ್ಜನ್ಯ ತಡೆಗೆ ಕಾನೂನು ಅರಿವು ಅಗತ್ಯ
ರಾಯಚೂರು: ಮಹಿಳೆಯರ ಮೇಲಾಗುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣ ತಡೆಯುವುದು ಸಮಾಜದಲ್ಲಿರುವ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಂಚಾರ ಪೊಲೀಸ್ ಠಾಣೆ ಸಿಪಿಐ ವಿನೋದ್ ಮುಕ್ತೇದಾರ ಕರೆ ನೀಡಿದರು. ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಬುಧವಾರ ಮಹಿಳೆ ಮತ್ತು ಮಕ್ಕಳ ರಕ್ಷಣೆ ಕುರಿತು ಆಟೋ ಚಾಲಕರಿಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅತ್ಯಾಚಾರ ಮತ್ತು ದೌರ್ಜನ್ಯದ ಪ್ರಕರಣ ತಡೆಗೆ ಪೊಲೀಸ್ ಇಲಾಖೆಗೆ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು. ಪೊಲೀಸ್ ಇಲಾಖೆ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಅದೇ ರೀತಿ ಆಟೋ ಚಾಲಕರೂ ನಗರದಲ್ಲಿ ಹಗಲು ರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಅಪರಾಧ ಪ್ರಕರಣ ತಡೆಗಟ್ಟಲು ಪೊಲೀಸರೊಂದಿಗೆ ಆಟೋ ಚಾಲಕರು ಸಹಕಾರ ನೀಡುವಂತೆ ಮನವಿ ಮಾಡಿದರು.
ಜಾಗೃತಿ ಮೂಡಿಸಿ: ಲೈಂಗಿಕ ದೌರ್ಜನ್ಯದ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕ. ಪಾಲಕರು ತಮ್ಮ ಮಕ್ಕಳಲ್ಲಿ ಶಿಕ್ಷಣದ ಜತೆಗೆ ಉತ್ತಮ ಮೌಲ್ಯಗಳನ್ನು ಮೂಡಿಸುವತ್ತ ಗಮನಹರಿಸುವಂತೆ ಸಲಹೆ ನೀಡಿದರು. ಸಂಚಾರ ಠಾಣೆ ಪಿಎಸ್ಐ ಅಯ್ಯನಗೌಡ ಪಾಟೀಲ್ ಮಾತನಾಡಿ, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ತಡೆಯುವ ಹಿನ್ನೆಲೆಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ದೌರ್ಜನ್ಯ, ದಬ್ಬಾಳಿಕೆಗೆ ಒಳಗಾದವರು ಮಹಿಳಾ ಸಹಾಯವಾಣಿ 1098 ಹಾಗೂ 1092 ಇಲ್ಲಿಗೆ ಕರೆ ಮಾಡಿ ದೂರು ನೀಡಬಹುದು. ದೂರು ನೀಡಿದವರ ಹೆಸರನ್ನು ಗೌಪ್ಯವಾಗಿರಿಸಲಾಗುತ್ತದೆ ಎಂದರು. ಆಟೋ ಚಾಲಕರು ಸಂಚಾರ ನಿಯಮ ಪಾಲನೆಗೆ ಹೆಚ್ಚು ಗಮನಹರಿಸಬೇಕು. ಜನನಿಬಿಡ ಪ್ರದೇಶದಲ್ಲಿ ಆಟೋ ಸ್ಟಾಂಡ್ ಬಿಟ್ಟು ಮನಬಂದಂತೆ ನಿಲುಗಡೆ ಮಾಡಲಾಗುತ್ತಿದೆ. ಅದರಿಂದ ಸಂಚಾರಕ್ಕೆ ವ್ಯತ್ಯಯವಾಗುತ್ತಿದ್ದು, ಎಚ್ಚರಿಕೆ ವಹಿಸಲು ಸೂಚಿಸಿದರು. ಕಾರ್ಯಕ್ರಮದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಮಹೆಬೂಬ್ ಆಲಂ, ಜೈಕರವೇ ಜಿಲ್ಲಾಧ್ಯಕ್ಷ ಗಂಗಾಧರ ಸ್ವಾಮಿ, ಅಕ್ಬರ್ ಪಾಷಾ, ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

