ಗುಣಮಟ್ಟದ ಕಲ್ಲಿದ್ದಲಿಂದ ಕರೆಂಟ್ ಉತ್ಪಾದನೆ ಹೆಚ್ಚಳ: ನಾಗರಾಜ್
ರಾಯಚೂರು: ತಾಲೂಕಿನ ಶಕ್ತಿನಗರದಲ್ಲಿ ಇತ್ತೀಚೆಗೆ ಕೆಪಿಸಿ 45ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ ಆಯೋಜಿಸಲಾಗಿತ್ತು.
ಶಕ್ತಿನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಬೆಂಗಳೂರಿನ ಕೆಇಆರ್ಸಿ(ತಾಂತ್ರಿಕ) ನಿವೃತ್ತ ನಿರ್ದೇಶಕ ಬಿ.ಆರ್. ನಾಗರಾಜ್, ಶಾಖೋತ್ಪನ್ನ ಕೇಂದ್ರಗಳಿಗೆ ಗುಣಮಟ್ಟದ ಕಲ್ಲಿದ್ದಲು ದೊರೆತಲ್ಲಿ ಮತ್ತಷ್ಟು ಹೆಚ್ಚಿನ ವಿದ್ಯುತ್ ಉತ್ಪಾದನೆ ಸಾಧ್ಯ ಎಂದು ಹೇಳಿದರು.
ರಾಜ್ಯದಲ್ಲಿ ಸದ್ಯ 1400 ಮೆ.ವ್ಯಾ. ವಿದ್ಯುತ್ ಕೊರತೆಯಿದೆ. ಶಾಖೋತ್ಪನ್ನ ಕೇಂದ್ರಗಳಿಂದ ಹೆಚ್ಚಿನ ಪ್ರಮಾಣದ ವಿದ್ಯುತ್ ಉತ್ಪಾದನೆ ನಿರೀಕ್ಷಿಸಿದಲ್ಲಿ ಗುಣಮಟ್ಟದ ಕಲ್ಲಿದ್ದಲು ಒದಗಿಸಬೇಕಾಗುತ್ತದೆ. ಅದರಿಂದ ಕೇಂದ್ರದ ಉತ್ಪಾದನೆ ಸಾಮರ್ಥ್ಯ ಹೆಚ್ಚಳ ಕಾಣುತ್ತದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಆರ್ಟಿಪಿಎಸ್ನ ಇಡಿ ಸಿ. ವೇಣುಗೋಪಾಲ್ ಮಾತನಾಡಿದರು. ಆರ್ಪಿಸಿಎಲ್ ಮುಖ್ಯ ಎಂಜಿನಿಯರ್ ಕೆ.ವಿ. ವೆಂಕಟಾಚಲಪತಿ, ಮುಖ್ಯ ಎಂಜಿನಿಯರ್ಗಳಾದ ಬಿ.ಸಿ. ಮಹೇಂದ್ರ, ಚಿನ್ನ ಸೋಮಯ್ಯ, ಎಸ್.ಕೆ. ಪ್ರಭಾಕರ್ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಉಪ ಪ್ರಧಾನ ಪ್ರಬಂಧಕ ವಿ.ಎಸ್. ಭಾವಿಕಟ್ಟಿ, ಉಪ ವೈದ್ಯಕೀಯ ಅಧೀಕ್ಷಕ ಡಾ. ಶಂಕರ ಯಾದವಾಡ, ಉಪ ಪ್ರಧಾನ ಪ್ರಬಂಧಕ(ಹಣಕಾಸು) ಲಚಮಪ್ಪ ಮಾತನಾಡಿದರು.
ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ: ನಿಗಮದಲ್ಲಿ ಸತತ 25 ವರ್ಷ ಸೇವೆ ಸಲ್ಲಿಸಿದ ಹಿರಿಯ ಅಧಿಕಾರಿಗಳು, ಉದ್ಯೋಗಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಕ್ರೀಡೆಗಳಲ್ಲಿ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ನೀಡಿದರು. ನಂತರ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

