ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರದಾನ ಸಮಾರಂಭ 27ಕ್ಕೆ
ರಾಯಚೂರು: ನಗರದಲ್ಲಿ ಜು.27ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ ಮತ್ತು ವಿಪ್ರಶ್ರೀ ಪ್ರಶಸ್ತಿ ಪ್ರದಾನ ಹಾಗೂ ಶಾಸಕರು, ಸಂಸದರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದು ಮಹಾಸಭಾದ ವಲಯ ಉಪಾಧ್ಯಕ್ಷ ನರಸಿಂಗರಾವ್ ದೇಶಪಾಂಡೆ ಹೇಳಿದರು. ನಗರದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜು.27ರಂದು ಸಂಜೆ 4.30ಕ್ಕೆ ನಗರದ ರಂಗಮಂದಿರದಲ್ಲಿ ಸಮಾರಂಭ ಆಯೋಜಿಸಿದ್ದು, ಸಮಾರಂಭದ ಸಾನ್ನಿಧ್ಯವನ್ನು ಮಧ್ವಮಠ ಪ್ರಯಾಗದ ವಿದ್ಯಾತ್ಮ ತೀರ್ಥರು ವಹಿಸಲಿದ್ದಾರೆಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಗುಲ್ಬರ್ಗದ ಕೇಂದ್ರೀಯ ವಿವಿ ಪ್ರಭಾರಿ ಕುಲಪತಿ ಪ್ರೊ. ಎಂ.ಎನ್. ಕಡಗಂಚಿ, ಸಾಹಿತಿ ಡಾ. ಸ್ವಾಮಿರಾವ್ ಕುಲಕರ್ಣಿ, ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎಸ್. ನಂಜುಂಡಸ್ವಾಮಿ ಆಗಮಿಸಲಿದ್ದಾರೆಂದು ಹೇಳಿದರು. ರಾಯಚೂರಿನ ಸಭಾಪತಿ ಡಾ. ಆನಂದತೀರ್ಥ ಫಡ್ನೀಸ್ ಉಪಸ್ಥಿತರಿರಲಿದ್ದು, ಹಿರಿಯ ಸಾಹಿತಿ ವಿ.ಎಸ್. ಕಾಂತನವರ್ ಅವರಿಗೆ ವಿಪ್ರಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಶಾಸಕರು, ಸಂಸದರಿಗೆ ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದರು. ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ ಎಂದು ಹೇಳಿದರು. ಪ್ರತಿಭಾ ಪುರಸ್ಕಾರದ ಅಂಗವಾಗಿ ಸಮಾಜದಿಂದ ಕ್ರಿಕೆಟ್, ಚೆಸ್ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯ ವಿಜೇತರಿಗೆ ಸಮಾರಂಭದಲ್ಲಿ ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

