ಹೋಬಳಿ ಮಟ್ಟದ ಜನಸ್ಪಂದನ ಸಭೆ

Updated on: 

ಗುಲ್ಬರ್ಗ: ಗ್ರಾಪಂ ವ್ಯಾಪ್ತಿಯ ದೊಡ್ಡ ಗ್ರಾಮಗಳನ್ನು ಆಯ್ಕೆ ಮಾಡಿ ಜನಸ್ಪಂದನ ಸಭೆಗಳನ್ನು ಆಯಾ ತಾಲೂಕಿಗೆ ಸಂಬಂಧಪಟ್ಟ ಶಾಸಕರ ಅಧ್ಯಕ್ಷತೆಯಲ್ಲಿ ಆ.2ರಂದು ನಡೆಸುವಂತೆ ನಿರ್ದೇಶನ ನೀಡಿದೆ. ತಾಲೂಕು, ಸಮಯ, ಹೋಬಳಿ ಮತ್ತು ಸಭೆ ನಡೆಯುವ ಸ್ಥಳಗಳ ವಿವರ ಇಂತಿದೆ. ಗುಲ್ಬರ್ಗ- ಬೆ.11ಕ್ಕೆ ಫರಹತಾಬಾದ- ಗ್ರಾಪಂ ಕಾರ್ಯಾಲಯ ಹೊನ್ನಕಿರಣಗಿ.  ಆಳಂದ- ಬೆ.11ಕ್ಕೆ ಖಜೂರಿ-ಗ್ರಾಪಂ ಕಚೇರಿ ಕಿಣ್ಣಿಸುಲ್ತಾನ. ಅಫಜಲ್ಪುರ-ಬೆ.11ಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಂಚೋಳಿ. ಜೇವರ್ಗಿ- ಬೆ.10ಕ್ಕೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬುಟ್ನಾಳ. ಸೇಡಂ- ಬೆ.11ಕ್ಕೆ ಗ್ರಾಪಂ ಕಾರ್ಯಾಲಯ ಹಾಬಾಳ(ಟಿ). ಚಿತ್ತಾಪುರ- ಬೆ.10.30ಕ್ಕೆ ಶಹಾಬಾದ್- ಗ್ರಾಪಂ ಕಾರ್ಯಾಲಯ ಇಂಗಳಗಿ. ಚಿಂಚೋಳಿ- ಬೆಳಗಿನ 11ಕ್ಕೆ ಕೋಡ್ಲಿ ಹೋಬಳಿಯ ಶಾಲಾ ಆವರಣ ರುಸ್ತಂಪುರ.


ಅತ್ಯಾಚಾರ ಖಂಡಿಸಿ ಪ್ರತಿಭಟನೆ


ದೇವದುರ್ಗ: ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಅತ್ಯಾಚಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ಶುಕ್ರವಾರ ಎಸ್‌ಎಫ್‌ಐ ತಾ. ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಸಂಘಟನೆ ಕಾರ್ಯಕರ್ತರು, ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಘೋಷಣೆ ಕೂಗಿದರು. ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ಮೂಲಕ ಸಿಎಂಗೆ ಮನವಿ ಸಲ್ಲಿಸಿ, ಬೆಂಗಳೂರು ನಗರ ಸೇರಿ ರಾಜ್ಯದ ಹಲವೆಡೆ ಇತ್ತೀಚೆಗೆ ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರದ ಪ್ರಕರಣಗಳು ನಡೆದಿದ್ದು, ಸರ್ಕಾರ ಅವುಗಳಿಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರ ಅತ್ಯಾಚಾರ ಪ್ರಕರಣಗಳಿಗೆ ತಡೆಯೊಡ್ಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಬಲ ಕಾನೂನು ರಚಿಸಬೇಕಿದೆ. ಸರ್ಕಾರ ಕಾನೂನು ಸುವ್ಯವಸ್ಥೆ ಬಿಗಿಗೊಳಿಸುವಲ್ಲಿ ಅಸಡ್ಡೆ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳಿಗೆ ಕಾರಣರಾಗುವವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಹೋರಾಟಗಾರರು ಒತ್ತಾಯಿಸಿದರು. ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಬ್ಬೀರ ಜಾಲಹಳ್ಳಿ, ತಾ. ಅಧ್ಯಕ್ಷ ಮಹ್ಮದ ಮುಸ್ತಾಫ್, ಜಿಲ್ಲಾ ಉಪಾಧ್ಯಕ್ಷ ರಮೇಶ ರಾಮನಾಳ, ತಾ. ಕಾರ್ಯದರ್ಶಿ ಹನುಮಂತ, ಮೌನೇಶ, ಸಣ್ಣಯ್ಯ ಹಿರೇಮಠ, ವಿಶ್ವನಾಥ ಸೇರಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿದ್ದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com