ರಾಯಚೂರು

ಜಮೀನುಗಳಿಗೆ ಕಾಲುವೆ ನೀರು

Published On :

ಲಿಂಗಸ್ಗೂರು: ತಾಲೂಕಿನಲ್ಲಿ ನಾರಾಯಣಪುರ ಬಲದಂಡೆ, ರಾಂಪುರ ಏತ ನೀರಾವರಿ ಕಾಲುವೆಗಳು ಹಾದು ಹೋಗಿದ್ದರೂ ಕೆಲ ಗ್ರಾಮಗಳ ರೈತರ ಜಮೀನುಗಳು ನೀರಾವರಿ ಸೌಲಭ್ಯದಿಂದ ವಂಚಿತಗೊಂಡಿವೆ. ಈಗ ಅಂತಹ ವಂಚಿತ ಜಮೀನುಗಳನ್ನು ಗುರುತಿಸಿ ನೀರಾವರಿ ಸೌಲಭ್ಯ ಕಲ್ಪಿಸಲು ಮುಂದಾಗಿರುವುದು ರೈತರಲ್ಲಿ ಮಂದಹಾಸ ಮೂಡಿಸಿದೆ.
ಕೃಷ್ಣಾ ಭಾಗ್ಯ ಜಲನಿಗಮ ಇಂತಹ ಕಾರ್ಯಕ್ಕೆ ಮುಂದಾಗಿದ್ದು, ಪರಿಶಿಷ್ಟ ಜಾತಿ, ಪಂಗಡದ ರೈತರನ್ನು ಗುರುತಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಈಗಾಗಲೇ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪ್ರಸ್ತಾವನೆ ಸಿದ್ಧಪಡಿಸಿ ಒಪ್ಪಿಗೆಗೆ ಕಳುಹಿಸಲಾಗಿದೆ. ಸೋಲಾರ್ ಪಂಪ್ಸೆಟ್ ಅಳವಡಿಸುವ ಉದ್ದೇಶ ಹೊಂದಲಾಗಿದ್ದು, ರೈತರ ಗುಂಪುಗಳನ್ನು ರಚನೆ ಮಾಡಿ ಒಂದು ಐಸಿ ಸೆಟ್ನಿಂದ 4 ರಿಂದ 5 ಜನ ರೈತರು ಇದರ ಲಾಭ ಪಡೆಯುವ ನೂತನ ಯೋಜನೆಯಾಗಿದ್ದು, ಹನಿ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಪೈಪ್ಲೈನ್, ಹನಿ ನೀರಾವರಿ ಪೈಪ್ಲೈನ್ ಅಳವಡಿಸಿ ನೀರು ಪೂರೈಕೆ ಮಾಡಲಾಗುತ್ತದೆ. ತಾಲೂಕಿನಲ್ಲಿ ರಾಂಪೂರ ಏತನೀರಾವರಿ ಯೋಜನೆಗೆ ಸುಮಾರು 8 ಕೋಟಿ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗೆ 2.60 ಕೋಟಿ ವೆಚ್ಚದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ನೀರಾವರಿ ಪ್ರದೇಶದಲ್ಲಿ ಸಾಕಷ್ಟು ಹಳ್ಳ, ಬಸಿನೀರು ಹರಿದು ಹೋಗುತ್ತಿದ್ದು, ಇಂತಹ ನೀರನ್ನು ಬಳಸಿಕೊಂಡು ತೆರೆದ ಬಾವಿ ಮೂಲಕ ರೈತರ ಜಮೀನುಗಳಿಗೆ ನೀರು ಹಾಯಿಸುವ ಉದ್ದೇಶ ಹೊಂದಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.