ಜಾತ್ರೆಯ ಆಮಂತ್ರಣ ಪತ್ರಿಕೆಗೆ ಅಪಸ್ವರ: ಗ್ರಾಮಸ್ಥರ ಪ್ರತಿಭಟನೆ
ರಾಯಚೂರು: ತಾಲೂಕಿನ ಕಲ್ಮಲಾ ಗ್ರಾಮದಲ್ಲಿರುವ ಕರಿಯಪ್ಪ ತಾತನವರ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಗಣ್ಯರ ಮತ್ತು ಜನಪ್ರತಿನಿಧಿಗಳ ಹೆಸರು ಕೈಬಿಟ್ಟಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿ ಸೋಮವಾರ ಗ್ರಾಮಸ್ಥರು ಹಾಗೂ ಭಕ್ತರು ಪ್ರತಿಭಟನೆ ನಡೆಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಸಹಾಯಕ ಆಯುಕ್ತ ಮಾರುತಿ ಅವರಿಗೆ ದೂರು ಸಲ್ಲಿಸಿ, ಕಲ್ಮಲಾ ಜಾತ್ರೆಯು ಜಿಲ್ಲೆಯ ಪ್ರಮುಖ ಜಾತ್ರೆಯಾಗಿದೆ. ಜು.26ರಿಂದ ಆ.28ರವರೆಗೆ ನಡೆಯುತ್ತದೆ. ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಜಿಲ್ಲೆಯ ಗಣ್ಯರ ಹೆಸರು ಕೈ ಬಿಟ್ಟಿರುವುದು ಸರಿಯಲ್ಲ ಎಂದು ಟೀಕಿಸಿದರು. ಗ್ರಾಮದ ಹಿರಿಯ ಮುಖಂಡ ಹಾಗೂ ಜಿಪಂ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಕೆ. ಶರಣಪ್ಪ, ತಾಪಂ ಸದಸ್ಯೆ ಲಿಂಗಮ್ಮ ಸೇರಿ ಊರಿನ ಗಣ್ಯರು, ಶಾಸಕ, ಸಚಿವರು ಮತ್ತು ಜಿಪಂ, ತಾಪಂ, ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಹೆಸರು ಹಾಗೂ ನಾನಾ ರಂಗದಲ್ಲಿ ಸೇವೆ ಸಲ್ಲಿಸಿದ ಊರಿನ ಗಣ್ಯರ ಹೆಸರು ಕೈಬಿಡಲಾಗಿದೆ ಎಂದು ದೂರಿದರು.
ಕಾರಣ ಕೂಡಲೇ ಆಡಳಿತವು ಆಹ್ವಾನ ಪತ್ರಿಕೆ ಮುದ್ರಿಸುವಲ್ಲಿ ಲೋಪ ಎಸಗಿದ ಅಧಿಕಾರಿ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ಚೆನ್ನಪ್ಪ, ಡಿ. ಜಂಬಣ್ಣ, ಶರಣಪ್ಪ, ಬಿ. ಬಸಣ್ಣ, ಪ್ರಕಾಶರಾವ್, ಶಿವಕುಮಾರ ಸ್ವಾಮಿ, ಗಂಗಪ್ಪ, ಎಚ್. ನರಸಪ್ಪ, ಹಾಲ್ವಿ ನರಸಪ್ಪ, ರವಿ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

