ರಾಯಚೂರು

ಸೋಯಾ ನಷ್ಟಕ್ಕೆ ಪರಿಹಾರ ನೀಡಿ: ರೈತ ಸಂಘ

Published On :

ಚಿಂಚೋಳಿ: ತಾಲೂಕಿನ ರೈತರಿಗೆ ಕಳಪೆ ಸೋಯಾಬಿನ್ ಬೀಜ ವಿತರಿಸಿದ ಕೃಷಿ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಹಾಗೂ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಬೆಳೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಹಾಗೂ ರೈತರು ಬಿತ್ತನೆಗೆ ನೀಡಿದ ಚೀಲಗಳನ್ನು ಪ್ರದರ್ಶಿಸಿ ಕೃಷಿ ಇಲಾಖೆ ಎದುರು ಪ್ರತಿಭಟನೆ ನಡೆಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿದರು. ತಾಲೂಕಿನ ಸುಲೇಪೇಟ್, ಕೋಡ್ಲಿ, ಐನಾಪುರ, ಚಿಂಚೋಳಿ. ಚಿಮ್ಮನಚೋಡ, ಮುಂತಾದ ರೈತ ಸಂಪರ್ಕ ಕೇಂದ್ರಗಳಿಂದ ರೈತರಿಗೆ ಸೋಯಾಬಿನ್ ಬೀಜ ಒಂದು ಹಳದಿ ಮತ್ತು ಇನ್ನೊಂದು ಹಸಿರು ಬಣ್ಣವುಳ್ಳ ಬೀಜಗಳ ಚೀಲಗಳನ್ನು ನೀಡಿದ್ದಾರೆ. ಕಳಪೆ ಮಟ್ಟದಿಂದ ಕೂಡಿದ ಸೋಯಾಬೀನ್ ಬೀಜ ವಿತರಿಸಿದ ಕೃಷಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ನಾನಾ ಬೇಡಿಕೆಗಳ ಮನವಿ ಪತ್ರವನ್ನು ಸಹಾಯಕ ಕೃಷಿ ಅಧಿಕಾರಿ ಬಿ.ಎನ್. ಚೂಡೆ ಸ್ವೀಕರಿಸಿ ಮಾತನಾಡಿದ ಅವರು, ಈಗಾಗಲೇ ಸೋಯಾಬಿನ್ ಬೀಜ ಬಿತ್ತನೆ ಮಾಡಿದ ರೈತರ ಹೊಲಗಳಿಗೆ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ, ವರದಿ ಬರಬೇಕಾಗಿದೆ ಎಂದರು. ತಾಲೂಕಿನ ಕೋಡ್ಲಿ, ರುಮ್ಮನಗೂಡ, ಹಲಚೇರಾ, ರಟಕಲ್ ಮುಂತಾದ ಗ್ರಾಮಗಳ ರೈತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.