ರಾಯಚೂರು

ನಗರಸಭೆಯಲ್ಲಿ ತುಘಲಕ್ ಆಡಳಿತ

Published On :

ಸಿಂಧನೂರು: ನಗರಸಭೆಯಲ್ಲಿ ತುಘಲಕ್ ಆಡಳಿತ ನಡೆದಿದ್ದು, ಕಾನೂನು ಬಾಹಿರವಾದ ತೀರ್ಮಾನಗಳನ್ನು ತೆಗೆದುಕೊಂಡು ಆಡಳಿತ ವ್ಯವಸ್ಥೆ ಕುಸಿಯಲು ಆಡಳಿತ ಮಂಡಳಿ ಕಾರಣವಾಗಿದೆ ಎಂದು ಮಾಜಿ ಶಾಸಕ ವೆಂಕಟರಾವ ನಾಡಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏಳರಾಗಿ ಕ್ಯಾಂಪಿನ ನಿವಾಸಿಗಳಿಗೆ 381 ನಿವೇಶನಗಳ ಹಕ್ಕುಪತ್ರಗಳನ್ನು ತಮ್ಮ ಅಧಿಕಾರವಧಿಯಲ್ಲಿ ನೀಡಲಾಗಿತ್ತು. ಆದರೆ ಈಗ ನಗರಸಭೆ ಆಡಳಿತ ಮಂಡಳಿ ನಿವೇಶನ ಹೊಂದಿದವರು 30 ಸಾವಿರ ವಂತಿಗೆ ಕಟ್ಟಿ ಮನೆಗಳನ್ನು ಕಟ್ಟಿಸಿಕೊಳ್ಳದಿದ್ದರೆ, ಅಂತವರ ಹಕ್ಕುಪತ್ರಗಳನ್ನು ರದ್ದುಪಡಿಸಲು ಆಶ್ರಯ ಸಮಿತಿ ಸಭೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ ನಿರ್ಣಯ ಕೈಗೊಂಡಿರುವುದು ಕಾನೂನು ಬಾಹಿರ ಎಂದು ಟೀಕಿಸಿದರು. ನಂತರ ಸುದ್ದಿಗಾರರೊಂದಿಗೆ ಏಳರಾಗಿ ಕ್ಯಾಂಪಿನ ನಿವಾಸಿಗಳನ್ನು ಮಾಜಿ ಶಾಸಕರು ಭೇಟಿಯಾಗಿ ಅವರ ಸಮಸ್ಯೆ ಆಲಿಸಿದರು. ಅಲ್ಲಿ ಅನೇಕರು ನಗರಸಭೆಯ ಆಡಳಿತ ಮಂಡಳಿಯ ವಿರುದ್ಧ ಹರಿಹಾಯ್ದರು. ಕಾಮಗಾರಿಗಳು ಸಹ ಕಳಪೆ ಮಟ್ಟದಿಂದ ಕೂಡಿವೆ ಎಂದು ಅಲ್ಲಿನ ನಿವಾಸಿಗಳಾದ ಲಕ್ಷ್ಮೀ, ಅಂಬಮ್ಮ, ಯಂಕಪ್ಪ ಮತ್ತಿತರರು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.