ರಾಯಚೂರು

ಶಿಕ್ಷಣದ ಜತೆ ಉತ್ತಮ ಸಂಸ್ಕೃತಿ, ಸಂಸ್ಕಾರ ಅಗತ್ಯ: ಶಾಸಕ ವಜ್ಜಲ್

Published On :

ಕ.ಪ್ರ. ವಾರ್ತೆ ್ಣ ಲಿಂಗಸ್ಗೂರು ್ಣ ಜೂ.2
ದೇಶದ ಸಂಸ್ಕೃತಿ ನಶಿಸಿ ಹೋಗುತ್ತಿರುವ ಇಂದಿನ ದಿನಮಾನಗಳಲ್ಲಿ ಮಕ್ಕಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರ ಹೊಂದುವುದು ಅಗತ್ಯ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ತಾಲೂಕಿನ ಸುಕ್ಷೇತ್ರ ಅಮರೇಶ್ವರದಲ್ಲಿ ಅಮರೇಶ್ವರ ಜನಕಲ್ಯಾಣ ಪ್ರತಿಷ್ಠಾನದಿಂದ ಮೇ 19ರಿಂದ ಜೂ.2ರವರೆಗೆ ಹಮ್ಮಿಕೊಂಡಿದ್ದ 2ನೇ ರಾಜ್ಯ ಮಟ್ಟದ ವೀರಶೈವ ಜಂಗಮ ತರಬೇತಿ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಸಂಸ್ಕಾರ ಶಿಬಿರಗಳಿಗೆ ಸಹಕಾರ: ಸನಾತನ ವೀರಶೈವ ಸಮಾಜ ಬಂಧುಗಳು ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವುದು ಶ್ಲಾಘನೀಯ. 12ನೇ ಶತಮಾನದಲ್ಲಿ ಬಸವಾದಿ ಪ್ರಮಥರು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ ಸರಿದಾರಿಗೆ ತರುವಲ್ಲಿ ಶ್ರಮಿಸಿದ್ದಾರೆ. ಅದೇ ರೀತಿ ಲಿಂ. ಪಂಡಿತ್ ಪುಟ್ಟರಾಜ ಗವಾಯಿಗಳು ಅಂಧರ ಬಾಳಿಗೆ ಬೆಳಕಾಗಿದ್ದರು. ಇಂತಹ ಮಹಾನ್ ವ್ಯಕ್ತಿಗಳ ಆದರ್ಶ ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಣವಂತರಾಗುವ ಜೊತೆಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಹೊಂದಬೇಕು ಎಂದರು.
ಸನ್ಮಾನ: ಸಮಾರಂಭದಲ್ಲಿ ಅಮರೇಶ್ವರ ಅಭಿನವ ಗುರುಗಜದಂಡ ಶಿವಾಚಾರ್ಯ ಸ್ವಾಮೀಜಿ, ಹಲಗೂರು ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಜಂಗಮ ಸಮಾಜದ ಜಿಲ್ಲಾ ಕಾರ್ಯದರ್ಶಿ ಕಿಡಿಗಣಯ್ಯಸ್ವಾಮಿ, ಡಾ. ಎಸ್.ಎಸ್. ಗುಬ್ಬಿ, ಮುಖಂಡರಾದ ಅಂಬಣ್ಣ ಸಾಹುಕಾರ, ಪಾಲಾಕ್ಷಯ್ಯ ಗವಾಯಿ, ಎಸ್.ಪಿ. ಸಿದ್ಧಯ್ಯಸ್ವಾಮಿ ಕವಿತಾಳ, ಗಿರಿಮಲ್ಲನಗೌಡ ಕರಡಕಲ್, ವಿನಯ ಶಾಸ್ತ್ರಿ ಸೇರಿದಂತೆ ಇನ್ನಿತರರು ಇದ್ದರು. ಇದೇ ವೇಳೆ ದೂರದರ್ಶನ ಕಲಾವಿದೆ ಇಂದುಶ್ರೀ ಬೆಂಗಳೂರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಅಮರೇಶ್ವರ ಜನಕಲ್ಯಾಣ ಪ್ರತಿಷ್ಠಾನದಿಂದ ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.