ರಾಯಚೂರು

ಉಪನ್ಯಾಸಕರ ಹುದ್ದೆ ಭರ್ತಿ: ಶಾಸಕರಿಗೆ ಮನವಿ

Published On :

ಕ.ಪ್ರ. ವಾರ್ತೆ ಲಿಂಗಸ್ಗೂರು ಜೂ.4
ಪಟ್ಟಣದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗಿದೆ. ಕೂಡಲೇ ಖಾಲಿ ಇರುವ ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಲೇಜು ಪ್ರಾಚಾರ್ಯರ ನೇತೃತ್ವದಲ್ಲಿ ಸಿಬ್ಬಂದಿ ಬುಧವಾರ ಶಾಸಕ ಮಾನಪ್ಪ ವಜ್ಜಲ್‌ರಿಗೆ ಮನವಿ ಸಲ್ಲಿಸಿದರು.
ಸ್ಥಳೀಯ ಹಳೆ ವಿಸಿಬಿ ಕಾಲೇಜಿನಲ್ಲಿ ನಡೆಸಲಾಗುತ್ತಿದ್ದ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಹೊಸದಾಗಿ ನಿರ್ಮಿಸಿದ ಕಾಲೇಜು ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸಂಸ್ಥೆಗೆ 31 ಉಪನ್ಯಾಸಕರ ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ ಕೇವಲ 15 ಜನ ಉಪನ್ಯಾಸಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಇರುವ ಉಪನ್ಯಾಸಕರಲ್ಲಿ ಕೆಲವರು ವರ್ಗಾವಣೆಗೆ ಪ್ರಯತ್ನ ನಡೆಸಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ. ಸಂಸ್ಥೆಯಲ್ಲಿ 570 ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಿದ್ದು, ಅಗತ್ಯ ಡೆಸ್ಕುಗಳಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.
ಹುದ್ದೆಗಳು: ಖಾಲಿ ಇರುವ ಹುದ್ದೆ- ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗಕ್ಕೆ 7 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ ಕೇವಲ 3 ಜನ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗಕ್ಕೆ ಮಂಜೂರಾದ 7 ಹುದ್ದೆಗಳಲ್ಲಿ ಕೇವಲ 4 ಜನ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ದೂರಸಂಪರ್ಕ ಎಂಜಿನಿಯರಿಂಗ್ ವಿಭಾಗಕ್ಕೆ ಮಂಜೂರಾದ 7 ಹುದ್ದೆಗಳಲ್ಲಿ 4 ಜನ ಉಪನ್ಯಾಸಕರು, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗಕ್ಕೆ ಮಂಜೂರಾದ 8 ಹುದ್ದೆಗಳಲ್ಲಿ ಕೇವಲ 3 ಜನ ಉಪನ್ಯಾಸಕರು ಹಾಗೂ ವಿಜ್ಞಾನ ವಿಭಾಗಕ್ಕೆ ಮಂಜೂರಾದ 2 ಹುದ್ದೆಗಳಲ್ಲಿ ಕೇವಲ ಒಬ್ಬ ಉಪನ್ಯಾಸಕ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅನುದಾನ: ಅಲ್ಲದೆ ಸಂಸ್ಥೆಯಲ್ಲಿ ಕೇವಲ 50 ಕಂಪ್ಯೂಟರ್‌ಗಳಿದ್ದು, 4 ವರ್ಷಗಳ ಹಿಂದೆ ಖರೀದಿಸಿದ ಕಂಪ್ಯೂಟರ್‌ಗಳಲ್ಲಿ ಕೆಲವು ನಿರುಪಯುಕ್ತವಾಗಿವೆ. ಇದರಿಂದ ವಿದ್ಯಾರ್ಥಿಗಳಿಗೆ ಸಾಕಾಗುತ್ತಿಲ್ಲ. ಕೂಡಲೇ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಿರುವ 100 ಡೆಸ್ಕ್‌ಗಳನ್ನು ಖರೀದಿಸಲು ತಾಂತ್ರಿಕ ಶಿಕ್ಷಣ ನಿದೇಶಕರು ಅಥವಾ ಬೇರೆ ಯಾವುದೇ ಮೂಲದಿಂದ ಅನುದಾನ ಮಂಜೂರು ಮಾಡಿಸಬೇಕು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕನಿಷ್ಠ 50 ಕಂಪ್ಯೂಟರ್‌ಗಳ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.