ರಾಯಚೂರು

ಅತ್ಯಾಚಾರಕ್ಕೆ ಯತ್ನ: ಗೂಸಾ

Published On :

ಸಿಂಧನೂರು: ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನೊಬ್ಬನಿಗೆ ಸಾರ್ವಜನಿಕರು ಥಳಿಸಿ, ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮೂರುಮೈಲ್ ಕ್ಯಾಂಪ್‌ನಲ್ಲಿ ನಡೆದಿದೆ.  ಇಲ್ಲಿನ ರಂಭಾಪುರಿ ಖಾಸಾಶಾಖಾ ಮಠದಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬಳ ಮೇಲೆ ಇಬ್ಬರು ಯುವಕರು ಮಠದಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಕುಡಿಯಲು ನೀರು ಕೇಳುವವರಂತೆ ನಾಟಕವಾಡಿ, ಆಕೆಯ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದರಿಂದ ಎಚ್ಚೆತ್ತ ಮಹಿಳೆ ಪ್ರತಿರೋಧವೊಡ್ಡಿ ಚೀರಿದ್ದಾಳೆ. ಮಠದ ಮುಂಭಾಗದಲ್ಲಿದ್ದ ನಾಯಿಯೊಂದು ಗಲಾಟೆಗೆ ಬೊಗಳಲು ಶುರುವಿಟ್ಟುಕೊಂಡಿದೆ. ಇದರಿಂದ ವಿಚಲಿತಗೊಂಡ ದುಷ್ಕರ್ಮಿಗಳು ನಾಯಿ ಬೆನ್ನಟ್ಟುತ್ತಿದ್ದಂತೆ ದಿಕ್ಕಾಪಾಲಾಗಿ ಓಡಿ ಹೋದರೆಂದು ತಿಳಿದು ಬಂದಿದೆ. ಆ ನಂತರ ಬೆಳಿಗ್ಗೆ ಎಲ್ಲರಿಗೂ ವಿಷಯ ಗೊತ್ತಾಗಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ತಪ್ಪಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆಯಿಂದ ಮೂರುಮೈಲ್ ಕ್ಯಾಂಪ್‌ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.