ಮುಂಗಾರಿನ ಕೃಷಿ ಹಂಗಾಮ
ವಿಶೇಷ ವರದಿ
ರಾಯಚೂರು: ಕಳೆದ ವರ್ಷ ಕೃಷಿ ಉತ್ಪನ್ನಗಳ ಬೆಲೆ ಕುಸಿತ, ಖರೀದಿ ಕೇಂದ್ರಾರಂಭಕ್ಕೆ ಹೋರಾಟದಂಥ ಸಂಕಷ್ಟ ಎದುರಿಸಿದ್ದ ರೈತರು ಪ್ರಸಕ್ತ ಮುಂಗಾರು ಹಂಗಾಮಿಗೆ ಮತ್ತೆ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ.
ರಾಜ್ಯಕ್ಕೆ ಮುಂಗಾರು ಇಷ್ಟರಲ್ಲಿಯೇ ಪ್ರವೇಶಿಸಲಿರುವುದರಿಂದ ರೈತರು ಹೊಲಗಳನ್ನು ಕೃಷಿ ಕಾರ್ಯಕ್ಕೆ ಸಜ್ಜುಗೊಳಿಸುತ್ತಿದ್ದಾರೆ. ಕೃಷಿ ಇಲಾಖೆ ಸಹ ರೈತರಿಗೆ ಅವಶ್ಯಕ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಒದಗಿಸಲು ಸಜ್ಜಾಗಿದೆ.
ಜಿಲ್ಲೆಯಲ್ಲಿ ತುಂಗಭದ್ರಾ ಮತ್ತು ಕೃಷ್ಣಾ ನದಿಗಳು ಹರಿಯುತ್ತಿದ್ದರೂ, ಅನೇಕ ಭಾಗ ಮಳೆಯಾಧರಿತ ಪ್ರದೇಶವಿದೆ. ಎರಡೂ ನದಿಗಳಿಂದ ನೀರಾವರಿಯಾಗಿರುವ ಪ್ರದೇಶದ ರೈತರು ಆಯಾ ಯೋಜನೆಗಳ ಕಾಲುವೆಗಳಲ್ಲಿ ನೀರು ಹರಿಯುವವರೆಗೆ ಕಾಯಲೇ ಬೇಕು. ಆದರೆ ಮಳೆಯಾಧರಿತ ಪ್ರದೇಶದ ರೈತರು ಮುಂಗಾರು ಹಂಗಾಮಿಗೆ ಅಗತ್ಯ ಸಿದ್ಧತೆಯಲ್ಲಿದ್ದಾರೆ.
ಒಟ್ಟು ಕ್ಷೇತ್ರ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿಗೆ ಒಟ್ಟು 307100 ಹೆಕ್ಟೇರ್ಪ್ರ್ದೇಶದಲ್ಲಿ ಬಿತ್ತನೆ ಗುರಿಯಿದೆ. ಇದರಲ್ಲಿ ನೀರಾವರಿ ಪ್ರದೇಶದಲ್ಲಿ 142150 ಹೆಕ್ಟೇರ್ ಹಾಗೂ ಖುಷ್ಕಿ ಪ್ರದೇಶ 164950 ಹೆಕ್ಟೇರ್ನಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಅದರಲ್ಲೂ ಮುಂಗಾರು ಹಂಗಾಮಿಗೆ ನೀರಾವರಿಯಲ್ಲಿ ಬತ್ತ- 1ಲಕ್ಷ ಹೆಕ್ಟೇರ್, ಸೂರ್ಯಕಾಂತಿ- 4 ಸಾವಿರ ಹೆಕ್ಟೇರ್, ಶೇಂಗಾ- 2700 ಹೆಕ್ಟೇರ್, ಹತ್ತಿ- 26 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ನಿರೀಕ್ಷೆಯಿದೆ.
ರಸಗೊಬ್ಬರ: ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ರೈತರಿಗೆ ಒಟ್ಟು 203900 ಮೆಟ್ರಿಕ್ ಟನ್ ರಸಗೊಬ್ಬರದ ಅವಶ್ಯಕತೆಯಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಬಳಿಯ 35988 ಮೆಟ್ರಿಕ್ ಟನ್ ಬಳಕೆಯಾಗದೇ ಉಳಿದ ರಸಗೊಬ್ಬರ ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 57804 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ. ಖಾಸಗಿಯವರ ಬಳಿ 21816 ಮೆಟ್ರಿಕ್ ಟನ್ ರಸಗೊಬ್ಬರದ ಸಂಗ್ರಹವಿದೆ.
ಚಿಂತೆ ಬೇಡ: ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಜಿಲ್ಲೆಯಲ್ಲಿ ದಾಸ್ತಾನಿರಿಸಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಲಭ್ಯವಿದ್ದು, ರೈತರು ಆತಂಕ ಪಡಬೇಕಾಗಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶ್ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

