ರಾಯಚೂರು

55ನೇ ಉಪಕಾಲುವೆ ಅಕ್ರಮ ಪೈಪ್

Published On :

ಕ.ಪ್ರ. ವಾರ್ತೆ ್ಣ ಸಿಂಧನೂರು ್ಣ ಜೂ.8
ಮಸ್ಕಿ ಬಳಿ ಇರುವ ನಂ.55ನೇ ಉಪಕಾಲುವೆ ವ್ಯಾಪ್ತಿಯ ಎಲ್ಲ ಅಕ್ರಮ ಪೈಪ್‌ಗಳನ್ನು ತೆರವುಗೊಳಿಸುವುದಾಗಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿ ಹಿಂಪಡೆಯಲಾಗಿದೆ.
ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನಲ್ಲಿರುವ ನೀರಾವರಿ ಇಲಾಖೆ ಕಾರ್ಯಾಲಯದ ಮುಂದೆ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಜಂಟಿ ಆಶ್ರಯದಲ್ಲಿ ಪೈಪ್‌ಗಳ ತೆರವಿಗಾಗಿ ಧರಣಿ ಹಮ್ಮಿಕೊಳ್ಳಲಾಗಿತ್ತು.
ಈಗಾಗಲೇ ಅಕ್ರಮವಾಗಿ 55ನೇ ವಿತರಣಾ ಕಾಲುವೆಯ ನೀರನ್ನು ಪಡೆಯುತ್ತಿದ್ದ 45 ಅಕ್ರಮ ಪೈಪ್‌ಗಳನ್ನು ತೆರವುಗೊಳಿಸಲಾಗಿದೆ. ನೀರಾವರಿ ಇಲಾಖೆಯ ಅನುಮತಿ ಪಡೆದು ಹಳ್ಳದ ಅಥವಾ ಅನುಪಯುಕ್ತವಾಗಿ ಹರಿಯುತ್ತಿದ್ದ ಕಾಲುವೆಯ ಬಸಿ ನೀರನ್ನು ಉಪಯೋಗಿಸುತ್ತಿದ್ದ ರೈತರಿಗೆ ತೊಂದರೆ ಕೊಡುವುದು ಸರಿಯಲ್ಲ. ಎಡದಂಡೆ ನಾಲೆ ವ್ಯಾಪ್ತಿಯ 36, 54 ಹಾಗೂ ಎಲ್ಲ ವಿತರಣಾ ಕಾಲುವೆಗಳ ಅಕ್ರಮ ಪೈಪುಗಳನ್ನು ತೆರವುಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಕೆಳ ಭಾಗದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.
ತೆರವುಗೊಳಿಸಿ: ಅಧೀಕ್ಷಕ ಎಂಜಿನಿಯರ್ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಬರುವ ನೀರಾವರಿಗೆ ಒಳಪಡದ ಜಮೀನಿಗೆ ಯಾವುದೇ ಮೂಲದಿಂದ ನೀರು ಪಡೆಯುವುದು ಅಕ್ರಮವೆಂದು ಘೋಷಿಸಿರುವುದರಿಂದ ಎಲ್ಲ ಪೈಪ್‌ಗಳನ್ನು ತೆರವುಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಕಾರ್ಯದರ್ಶಿ ಅಮೀನಪಾಷಾ ದಿದ್ದಿಗಿ ಒತ್ತಾಯಿಸಿದರು.
ಅಕ್ರಮ ಪೈಪ್ ಹಾಗೂ ಪಂಪ್‌ಸೆಟ್ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಹಲವು ದಿನಗಳಿಂದ ಕೆಳಭಾಗದ ರೈತರು ಮುಷ್ಕರ ನಡೆಸುತ್ತಿದ್ದರು. ಜಿಲ್ಲಾಧಿಕಾರಿಗಳ ಭರವಸೆಯಿಂದ ರೈತ ಮುಖಂಡರು ಸತ್ಯಾಗ್ರಹ ವಾಪಸ್ ಪಡೆದರು.
ಈ ಸಂದರ್ಭದಲ್ಲಿ ಲಿಂಗಸ್ಗೂರು ಸಹಾಯಕ ಆಯುಕ್ತ ಟಿ. ಯೋಗೇಶ, ತಹಸೀಲ್ದಾರ್ ಜಗನ್ನಾಥರೆಡ್ಡಿ, ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಹನುಮಂತಪ್ಪ, ಜೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರ ದೇಸಾಯಿ, ತಾಪಂ ಮಾಜಿ ಅಧ್ಯಕ್ಷ ರಮೇಶಪ್ಪ ದಿದ್ದಿಗಿ, ಕರ್ನಾಟಕ ರೈತ ಸಂಘದ ಅಧ್ಯಕ್ಷ ರಮೇಶ ಪಾಟೀಲ್ ಬೇರಿಗಿ, ಬಸವರಾಜ ಗೋಡಿಹಾಳ, ಆರ್‌ವೈಎಫ್‌ಐ ರಾಜ್ಯ ಘಟಕ ಅಧ್ಯಕ್ಷ ಗಂಗಾಧರ, ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.