ಹಿಂದೂ ವಿರೋಧಿ ಎನ್ಸಿಇಆರ್ಟಿಪಠ್ಯಕ್ರಮ ಬದಲಿಸಿ
ರಾಯಚೂರು: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಸಂಸ್ಥೆಯ(ಎನ್ಸಿಇಆರ್ಟಿ) ಪಠ್ಯಕ್ರಮವು ವಿವಾದಕ್ಕೆ ಕಾರಣವಾಗಿದ್ದು, ಭಾರತೀಯ ಸಂಸ್ಕೃತಿ ಬಗ್ಗೆ ಸುಳ್ಳು, ಅವಮಾನಕಾರಿ ಮಾಹಿತಿ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಹಿಂದೂದ್ವೇಷಿ ವಿದ್ಯಾರ್ಥಿಗಳನ್ನು ನಿರ್ಮಿಸುವಂಥ ಪಠ್ಯಕ್ರಮ ಕೂಡಲೇ ಬದಲಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆ ಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಎನ್ಸಿಇಆರ್ಟಿ ಪುರಾವೆ, ಆಧಾರವಿಲ್ಲದ ಹಾಗೂ ಮಕ್ಕಳ ಮನಸ್ಸು ಕೆಡಿಸುವಂಥ ವಿಚಾರಗಳನ್ನು ತನ್ನ ಪಠ್ಯಕ್ರಮವಾಗಿ ಬಳಕೆ ಮಾಡುತ್ತಿದೆ ಎಂದು ಟೀಕಿಸಿದರು.
ಈ ಹಿಂದೆ ಭಗತ್ ಸಿಂಗ್ ಅವರನ್ನು ಭಯೋತ್ಪಾದಕರು ಎಂದು ಸಂಬೋಧಿಸಲಾಗಿತ್ತು. ಭಾರತೀಯ ಮೂಲ ಇತಿಹಾಸವನ್ನು ವಿಕೃತವಾಗಿ ಚಿತ್ರಿಸುವ ಕಾರ್ಯ ಸಂಸ್ಥೆಯು ಮಾಡಿದೆ. ಹೀಗೆ ಹತ್ತು ಹಲವಾರು ಬಾರಿ ವಿವಾದಕ್ಕೆ ದಾರಿ ಮಾಡಿರುವ ಸಂಸ್ಥೆಯ ಪಠ್ಯಕ್ರಮ ಕೂಡಲೇ ಬದಲಿಸುವಂತೆ ಆಗ್ರಹಿಸಿದರು. ದೇಶದ ಸುಮಾರು ಶೇ.13.33ರಷ್ಟು ವಿವಿ ಗಳಲ್ಲಿ ಎನ್ಸಿಇಆರ್ಟಿಯ ಪಠ್ಯಕ್ರಮ ಬೋಧಿಸಲಾಗುತ್ತಿದ್ದು, ಕ್ಷಾಂತರ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವುದು ತಪ್ಪು ಇತಿಹಾಸದ ಅರಿವು ಮೂಡಿಸುವ ಕಾರ್ಯ ಜಾರಿಯಲ್ಲಿದೆ. ಸರ್ಕಾರ ಕೂಡಲೇ ಈ ನಿಟ್ಟಿನಲ್ಲಿ ಗಮನಹರಿಸಿ ವಾಸ್ತವ ಐತಿಹಾಸಿಕ ವಿಚಾರಗಳನ್ನು ಕಲಿಸುವ ಕಾರ್ಯ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ನಿಟ್ಟಿನಲ್ಲಿ ಕೂಡಲೇ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಸಂಘಟನೆಯಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.ಸಂಘಟನೆಯ ಪ್ರಮುಖರಾದ ಕೃಷ್ಣವೇಣಿ, ಸರೋಜಮ್ಮ, ವಿಜಯಲಕ್ಷ್ಮಿ, ಜ್ಯೋತಿ, ಪದ್ಮಾ, ಸರಳಾ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

