ರಾಯಚೂರು

ಮಹಿಳೆಯರ ಮೇಲೆ ಹೆಚ್ಚಿದ ದೌರ್ಜನ್ಯ

Published On :

ರಾಯಚೂರು: ನಗರದ ಬಾಲಕಿಯರ ಸರ್ಕಾರಿ ಕಾಲೇಜಿನಲ್ಲಿ ಅಖಿಲ ಭಾರತ ಮಹಿಳಾ ಮತ್ತು ಸಾಂಸ್ಕೃತಿಕ ಸಂಘಟನೆಯಿಂದ ಈಚೆಗೆ ಮಹಿ ಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯದ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಮಾತನಾಡಿದ ಸಂಘಟನೆ ರಾಜ್ಯ ಕಾರ್ಯದರ್ಶಿ ಅಪರ್ಣಾ ಬಿ.ಆರ್. ಅವರು, ಉತ್ತರಪ್ರದೇಶ ಸೇರಿ ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರದ ಘಟನೆಗಳು ಹೆಚ್ಚುತ್ತಿವೆ. ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಶ್ಲೀಲತೆಯಿಂದಾಗಿ ಇಂತಹ  ಘಟನೆಗಳು ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಅತ್ಯಾಚಾರಕ್ಕೊಳಗಾದ ಮಹಿಳೆಯರ ಬಗ್ಗೆ ಬರೀ ಅನುಕಂಪ ತೋರಿಸದೇ ಅವರಿಗೆ ಧೈರ್ಯ ತುಂಬಿ ಸಮಾಜದಲ್ಲಿ ಅವರನ್ನು ಗೌರವದಿಂದ ಕಾಣುವಂತಾಗಬೇಕು. ನೊಂದ ಮಹಿಳೆಯರಿಗೆ ಪೋಲಿಸ್ ಠಾಣೆ, ಕೋರ್ಟ್‌ನಲ್ಲಿ ಹೆಣ್ಣು ಮಕ್ಕಳಿಗೆ ಗೌರವ ದೊರೆಯುತ್ತಿಲ್ಲ. ಇನ್ನೊಂದೆಡೆ  ಕ್ರೂರ ಪಾತಕಿ ಅಪರಾಧಿಗಳನ್ನು ಸಮರ್ಥಿಸಿಕೊಂಡು ಹೇಳಿಕೆ ನೀಡುತ್ತಿದ್ದಾರೆಂದು ಆರೋಪಿಸಿದರು.
ದೌರ್ಜನ್ಯದ ವಿರುದ್ಧ ಪ್ರಕರಣ ದಾಖಲಿಸಬೇಕು. ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿ ವರ್ಮಾ ಆಯೋಗವು ನೀಡಿದ ಶಿಫಾರಸುಗಳನ್ನು ಶೀಘ್ರಗತಿಯಲ್ಲಿ ಜಾರಿಗೆ ತಂದು ಅಪರಾಧಿಗಳಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು  ಆಗ್ರಹಿಸಿದರು. ಇನ್ಫೆಂಟ್ ಜೀಸಸ್ ಕಾಲೇಜಿನ ಉಪನ್ಯಾಸಕ ಪಿ.ಎಸ್. ಹಿರೇಮಠ್ ಮಾತನಾಡಿ, ಇಂದು ಶಿಕ್ಷಣದಲ್ಲಿ ನೈತಿಕತೆ ಮೌಲ್ಯಗಳನ್ನು ಅಳವಡಿಸಬೇಕಿದೆ. ಯಾವುದೇ ಆದರ್ಶ ವ್ಯಕ್ತಿಯ ತತ್ವಗಳನ್ನರಿಯದೇ ಯುವಜನತೆ ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದರು.
ಕಾಲೇಜಿನ ಹಿರಿಯ ಉಪನ್ಯಾಸಕ ಕುಂಟೆಪ್ಪ ಗೌರೀಪುರ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೆಣ್ಣು ಮಕ್ಕಳನ್ನು ಭೋಗದ ವಸ್ತುವಾಗಿ ಕಾಣಲಾಗುತ್ತಿದೆ. ಹೆಣ್ಣು ಮಕ್ಕಳಿಗೆ ಅನ್ಯಾಯವಾದರೆ ಅದರ ವಿರುದ್ಧ ಯುವಜನಾಂಗ ಒಗ್ಗೂಡಿ ಹೋರಾಡಬೇಕಿದೆ ಎಂಗರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಎಐಎಂಎಸ್ ಎಸ್ ಜಿಲ್ಲಾ ಕಾರ್ಯದರ್ಶಿ ಸರೋಜಾ ಗೋನವಾರ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.