ಕೃಷಿಗೆ ಮುಂಗಾರು ಹಬ್ಬ ಸ್ಫೂರ್ತಿ
ಕ.ಪ್ರ. ವಾರ್ತೆ , ರಾಯಚೂರು , ಜೂ. 14
ಕಾರಹುಣ್ಣಿಮೆಯ ಆಚರಣೆ ರೈತರ ಪಾಲಿಗೆ ಮಹತ್ವದ ಹಬ್ಬ. ಮುಂಗಾರು ಆಗಮನದ ಸಂದರ್ಭವೇ ಇಂಥ ಹಬ್ಬವನ್ನು ರಾಯಚೂರಿನಲ್ಲಿ ಮುನ್ನೂರು ಕಾಪು ಸಮಾಜವು ಆಯೋಜಿಸಿರುವುದು ಹೆಮ್ಮೆಯ ಸಂಗತಿ. ಇಂಥ ಆಚರಣೆಗಳು ಕೃಷಿಯಲ್ಲಿ ರೈತರಿಗೆ ಮತ್ತಷ್ಟು ಹಮ್ಮಸ್ಸು ಮೂಡಿಸುತ್ತವೆ ಎಂದು ಸಂಸದ ಬಿ.ವಿ. ನಾಯಕ ಹೇಳಿದರು.
ನಗರದ ರಾಜೇಂದ್ರ ಗಂಜ್‌ನಲ್ಲಿ ಮುನ್ನೂರು ಕಾಪು ಸಮಾಜದಿಂದ ಆಯೋಜಿಸಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಎರಡನೇ ದಿನ ಶನಿವಾರ ಅಖಿಲ ಭಾರತ ಮಟ್ಟದ ಎತ್ತುಗಳಿಗೆ ಎರಡು ಟನ್ ಭಾರದ ಕಲ್ಲು ಎಳೆ ಯುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಪ್ರೋತ್ಸಾಹ: ಆಧುನಿಕತೆಯ ಭರದಲ್ಲಿ ಗ್ರಾಮೀಣ ಭಾಗದ ಕಲೆ, ಕ್ರೀಡೆಗಳು ಇಂದಿನ ದಿನಮಾನದಲ್ಲಿ ಮರೆಯಾಗುತ್ತಿವೆ. ಇಂಥ ಸಂದರ್ಭದಲ್ಲಿ ಅಂಥ ಹಬ್ಬ, ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುನ್ನೂರು ಕಾಪು ಸಮಾಜವು ಆಯೋಜಿಸುತ್ತಿರುವ ಮುಂಗಾರು ರಾಯಚೂರು ಹಬ್ಬವು ರಾಜ್ಯಮಟ್ಟದಲ್ಲಿ ಹೆಸರು ಗಳಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಇಂಥ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುವ ಕಾರ್ಯ ಮಾಡಬೇಕಿದೆ ಎಂದರು.
ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್, ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಪರಂಪರೆ, ಸಂಸ್ಕೃತಿ ನೆನಪಿಸುವ ಕಾರ್ಯ ಮುನ್ನೂರು ಕಾಪು ಸಮಾಜ ಮಾಡುತ್ತಿದೆ. ಇಂಥ ಕಾರ್ಯಕ್ರಮಗಳಿಗೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ಮುನ್ನೂರು ಕಾಪು ಸಮಾಜದ ತಿಪ್ಪೇಶ್ವರ ಸ್ವಾಮೀಜಿ, ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಪಾಪಾರೆಡ್ಡಿ, ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ ಜಿ. ಬಸವರಾಜ ರೆಡ್ಡಿ, ಆರ್. ತಿಮ್ಮಯ್ಯ, ಕೆ. ಶಾಂತಪ್ಪ, ಜಿ. ಶೇಖರರೆಡ್ಡಿ, ಪುಂಡ್ಲ ನರಸರೆಡ್ಡಿ, ಎನ್. ಶೇಖರರೆಡ್ಡಿ, ದೊಡ್ಡಮಲ್ಲೇಶಪ್ಪ, ಬಿ. ನರಸರೆಡ್ಡಿ ಸೇರಿದಂತೆ ವಿವಿಧ ಮಠಗಳ ಮಠಾಧೀಶರು, ಹಾಗೂ ಮುನ್ನೂರು ಕಾಪು ಸಮಾಜದ ಪ್ರಮುಖರಿದ್ದರು. ಕರ್ನಾಟಕ, ಆಂಧ್ರದ ಎತ್ತುಗಳು ಎರಡು ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.
ಜನಸ್ತೋಮ: ನಗರದ ರಾಜೇಂದ್ರ ಗಂಜ್ ನಲ್ಲಿ ನಡೆಯುತ್ತಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದಲ್ಲಿ ಶನಿವಾರ ಸಾವಿರಾರು ಸಂಖ್ಯೆಯಲ್ಲಿ ಜನತೆ ಪಾಲ್ಗೊಂಡಿದ್ದರು. ಎರಡು ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆಯನ್ನು ವೀಕ್ಷಿಸಿ ಸಂಭ್ರಮಿಸಿದರು.
ಜನತೆ ಉರಿಬಿಸಿಲನ್ನೂ ಲೆಕ್ಕಿಸದೇ ಸ್ಪರ್ಧೆಯನ್ನು ವೀಕ್ಷಿಸಿ ಸಂತಸಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

