ರಾಯಚೂರು

ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಇಬ್ಬರು ಬಾಲಕರು ವಶಕ್ಕೆ

Published On :

ಲಿಂಗಸ್ಗೂರು: ಗೋನವಾಟ್ಲ ತಾಂಡಾದ 8 ವರ್ಷದ ಬಾಲಕಿ ಮೇಲೆ ಇಬ್ಬರು ಬಾಲಕರು ಅತ್ಯಾಚಾರವೆಸಗಿ ಭೀಕರವಾಗಿ ಕೊಲೆಗೈದ ಅಮಾನವೀಯ ಘಟನೆ ಭಾನುವಾರ ಸಂಜೆ ಜರುಗಿದೆ. ಇಂತಹ ಭೀಭತ್ಸ ಕೃತ್ಯ ಜರುಗಿದ ಮಾಹಿತಿ ತಿಳಿದ ಜನತೆ ಬೆಚ್ಚಿ ಬಿದ್ದಿದ್ದಾರೆ.
ತಾಲೂಕಿನ ಗೋನವಾಟ್ಲ ತಾಂಡಾದ ಮೋನಿಕಾ(ಹೆಸರು ಬದಲಾಯಿಸಲಾಗಿದೆ) ಎಂಬ ಬಾಲಕಿ ಮೇಕೆ ಮೇಯಿಸಲು ತೆರಳಿದ್ದ ಸಂದರ್ಭದಲ್ಲಿ ಇಬ್ಬರು ಬಾಲಕರು ಅತ್ಯಾಚಾರವೆಸಗಿ ನಂತರ ಕೊಲೆಗೈದು ನಾಲೆಯ ಪೊದೆಯಲ್ಲಿ ಬಿಸಾಕಿದ್ದು, ಬಾಲಕಿಯ ತಲೆಗೆ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆಗೈದಿದ್ದಾರೆಂದು ಪಾಲಕರು ಹಾಗೂ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆ ವಿವರ: ಮೋನಿಕಾ ಭಾನುವಾರ ಮೇಕೆ ಮೇಯಿಸಲು ತೆರಳಿದ್ದಾಳೆ. ಸಂಜೆ ಮೇಕೆಗಳು ಮಾತ್ರ ಮನೆಗೆ ಆಗಮಿಸಿವೆ. ಆದರೆ, ಬಾಲಕಿ ಮನೆಗೆ ಬಾರದೆ ಇದ್ದಾಗ, ಪಾಲಕರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದರು. ಎಲ್ಲೂ ಪತ್ತೆಯಾಗಿಲ್ಲ. ಬಾಲಕಿ ಜೊತೆ ತೆರಳಿದ್ದ ಬಾಲಕರಿಗೆ  500 ನೀಡಿ ವಿಚಾರಿಸಿದಾಗ ಘಟನೆ ಕುರಿತು ವಿವರ ನೀಡಿ, ಬಾಲಕಿಯ ಮೃತದೇಹ ತೋರಿಸಿದ್ದಾರೆ. ಆಕ್ರೋಶಗೊಂಡ ಪಾಲಕರು, ಗ್ರಾಮಸ್ಥರು ಬಾಲಕರನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಾಹಿತಿ ತಿಳಿದ ಡಿವೈಎಸ್‌ಪಿ ಅನಿತಾ ಹದ್ದಣ್ಣವರ್ ಹಾಗೂ ಸಿಪಿಐ ವರದರಾಜು ಗ್ರಾಮಕ್ಕೆ ಭೇಟಿ ನೀಡಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.