ಟಿಇಟಿ ಪರೀಕ್ಷೆ: ನಿಷೇಧಾಜ್ಞೆ
ರಾಯಚೂರು: ಜಿಲ್ಲೆಯ ಆಯ್ದ 23 ಪರೀಕ್ಷಾ ಕೇಂದ್ರಗಳಲ್ಲಿ ಜೂ.22ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಪರೀಕ್ಷೆ ಕಾರ್ಯಗಳು ಸುಗಮ ಹಾಗೂ ಕಾನೂನು ಬದ್ಧವಾಗಿ ನಡೆಸುವಂತೆ ಅನೂಕೂಲವಾಗಲು ಜೂ.22ರಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಸಿಬ್ಬಂದಿ ಮತ್ತು ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ ಯಾರೂ ನಿಷೇಧಿತ ಪ್ರದೇಶವನ್ನು ಪ್ರವೇಶಿಸುವಂತಿಲ್ಲ ಎಂದು ಸೂಚಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಮೊಬೈಲ್ ಪೋನ್ ನಿಷೇಧ. ಇದಲ್ಲದೆ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲ ಜೆರಾಕ್ಸ್ ಹಾಗೂ ಸೈಬರ್ ಕೆಫೆ ಮುಚ್ಚಲು ಸಹ ಅವರು ಆದೇಶಿಸಿದ್ದಾರೆ.
ವಿಶೇಷ ತರಬೇತಿಗೆ ಅರ್ಜಿ
ರಾಯಚೂರು: ಜಿಲ್ಲೆಯಲ್ಲಿ 2014-15ನೇ ಸಾಲಿಗೆ ಶಾಲೆಯಿಂದ ಹೊರಗುಳಿದ ನಗರ ಸೌಲಭ್ಯ ವಂಚಿತ ಮಕ್ಕಳಿಗೆ ಒಂದು ವರ್ಷದ ವಿಶೇಷ ತರಬೇತಿ ನೀಡಲು ವಿವಿಧ ಸಂಘ-ಸಂಸ್ಥೆಗಳಿಂದ ಅರ್ಜಿ ಕರೆಯಲಾಗಿದೆ. ಶಾಲೆಯಿಂದ ಹೊರಗುಳಿದ 132 ಮಕ್ಕಳಿಗಾಗಿ 12 ತಿಂಗಳ ವಸತಿಯುಕ್ತ ವಿಶೇಷ ತರಬೇತಿ ನೀಡಲು ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ್ದು, ಸಂಸ್ಥೆಯವರು ಕನಿಷ್ಠ ಐದು ವರ್ಷದ ಹಿಂದೆ ನೋಂದಾಯಿಸಿಕೊಂಡಿರಬೇಕು. 5 ವರ್ಷದ ವಾರ್ಷಿಕ ವರದಿ ಹಾಗೂ ಸಂಸ್ಥೆಯಲ್ಲಿ ಮಾನವ ಸಂಪನ್ಮೂಲದ ವಿವರ, 5 ವರ್ಷದ ಆಡಿಟ್ ವರದಿ ಹಾಗೂ ಆದಾಯ ತೆರಿಗೆ ಪಾವತಿಸಿದ ಪ್ರತಿ, ಹಣಕಾಸಿನ ವಹಿವಾಟು, ಶಿಕ್ಷಣ ಕ್ಷೇತ್ರದ ಕಾರ್ಯತಂತ್ರದ ಅನುಭವ ಇತ್ಯಾದಿ ವಿವರಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ವೆಬ್ಸೈಟ್ ವಿಳಾಸ ಢಿಢಿಢಿ.ಡಡಛ್ಞಛ್ಠಟಿಛಡಿಛ್ಞಛ.್ಜ್ಟಢ.್ಝಟಿ ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜು.30ರೊಳಗೆ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ, ಸರ್ವ ಶಿಕ್ಷಣ ಅಭಿಯಾನ ರಾಯಚೂರು ಇವರಿಗೆ ಸಲ್ಲಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

