ರಾಯಚೂರು

ಅಂಬಾದೇವಿಗೆ ಕಳಸಾರೋಹಣ ನಾಳೆ

Published On :

ಸಿಂಧನೂರು: ನಗರದ ಆದರ್ಶ ಕಾಲೋನಿಯ ಅಂಬಾಭವಾನಿ ದೇವಸ್ಥಾನದ 2ನೇ ವಾರ್ಷಿಕೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ಕಳಸಾರೋಹಣ, ಸಾಮೂಹಿಕ ವಿವಾಹ ಹಾಗೂ ಉಪನಯನ ಕಾರ್ಯಕ್ರಮವನ್ನು ಜೂ.22ರಂದು ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಎಸ್‌ಕೆ ಸಮಾಜದ ಅಧ್ಯಕ್ಷ ಶಶಿಕುಮಾರ ದಾನಿ ತಿಳಿಸಿದ್ದಾರೆ.
ಅಂಬಾಭವಾನಿ ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.21ರಂದು ನಗರದ ಎಪಿಎಂಸಿಯ ಗಣೇಶ ದೇವಸ್ಥಾನದಿಂದ ಕಳಸವನ್ನು ಕುಂಭ, ವಾದ್ಯಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಗುವುದು. ನಂತರ ದಾಸವಾಣಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.
22ರಂದು ಬೆಳಗ್ಗೆ 6 ಗಂಟೆಗೆ ರಂಗನಾಥ ಆಚಾರ್ ಸಾಲಗುಂದಾ ಇವರಿಂದ ಕಳಸ ಪ್ರತಿಷ್ಠಾಂಗ ಹೋಮ, 6.48ಕ್ಕೆ ಸಿಂಹಮೂರ್ತಿ ಪ್ರತಿಷ್ಠಾಪನೆ, 7.15ಕ್ಕೆ ಉಡುಪಿ ಪೇಜಾವರ ಮಠದ ಕಿರಿಯಪಟ್ಟ ವಿಶ್ವಪ್ರಸನ್ನ ಶ್ರೀಪಾದಂಗಳವರ ಅಮೃತ ಹಸ್ತದಿಂದ ಕಳಸಾರೋಹಣ ನಡೆಯಲಿದೆ. ನಂತರ 8.12ಕ್ಕೆ ಎಸ್‌ಎಸ್‌ಕೆ ಸಮಾಜದ 43 ಮಕ್ಕಳಿಗೆ ಉಪನಯನ, 7 ಜೋಡಿಗಳ ಸಾಮೂಹಿಕ ವಿವಾಹ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.