ರಾಯಚೂರು

ಜಿಎಸ್ಟಿ ವ್ಯವಸ್ಥೆಗೆ ವ್ಯಾಟ್ ತಂತ್ರಾಂಶಅನುಕೂಲ

Published On :

ರಾಯಚೂರು: ವಾಣಿಜ್ಯ ವ್ಯವಹಾರಗಳಿಗೆ ಸಂಬಂಧಿಸಿ ಪ್ರತಿಯೊಂದು ವ್ಯವಹಾರವನ್ನು ವ್ಯಾಟ್ ಇಎಎಸ್ ತಂತ್ರಾಂಶಕ್ಕೆ ಒಳಪಡಿಸಲಾಗುತ್ತಿದ್ದು, ಅದರಿಂದ ಜಿಎಸ್ಟಿ ವ್ಯವಸ್ಥೆಗೆ ಅನುಕೂಲವಾಗಲಿದೆ ಎಂದು ಗುಲ್ಬರ್ಗ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ಸಿದ್ದಪ್ಪ ಹೇಳಿದರು.
ನಗರದಲ್ಲಿ ಮಂಗಳವಾರ ಜಂಬಲದಿನ್ನಿ ರಂಗಮಂದಿರದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಿಂದ ಏರ್ಪಡಿಸಿದ್ದ ವಾಣಿಜ್ಯ ಖರೀದಿ ಮತ್ತು ಮಾರಾಟ ಬಿಲ್ಗಳ ವಿವರಗಳನ್ನು ವ್ಯಾಟ್ ಇಛಎಸ್ ತಂತ್ರಾಂಶದಲ್ಲಿ ಅಳವಡಿಸುವ ಕುರಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಾಣಿಜ್ಯ ವ್ಯವಹಾರಗಳ ಸಮಗ್ರತೆ ಕಾಪಾಡುವ ಉದ್ದೇಶದಿಂದ ದೇಶಾದ್ಯಂತ ಮುಂದಿನ ವರ್ಷ ಜಿಎಸ್ಟಿ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ವ್ಯವಹಾರ ವ್ಯಾಟ್ ಆಧಾರಿತ ತಂತ್ರಾಂಶದಲ್ಲಿ ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ ಎಂದು ಹೇಳಿದರು.
ದೇಶದಲ್ಲೇ ಕರ್ನಾಟಕವು ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಮೊದಲ ಸ್ಥಾನದಲ್ಲಿದೆ. ಈ ತಂತ್ರಾಂಶವನ್ನು ಅಳವಡಿಸಿಕೊಳ್ಳುವ ಮೂಲಕ ತಂತ್ರಜ್ಞಾನದಲ್ಲಿ ಮುಂದುವರೆಯುವ ನಿಟ್ಟಿನಲ್ಲಿ 50 ಲಕ್ಷ ಮೇಲ್ಪಟ್ಟ ವ್ಯವಹಾರ ನಡೆಸುವವರು ಮೇ ತಿಂಗಳಿನಿಂದಲೇ ಎಲ್ಲ ಅಂಕಿ-ಅಂಶ ತಂತ್ರಾಂಶದಲ್ಲಿ ಅಳವಡಿಸಬೇಕಿದೆ ಎಂದರು. ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ತ್ರಿವಿಕ್ರಮ್ ಜೋಷಿ, ವರ್ತಕರು ಹಾಗೂ ಗ್ರಾಹಕರ ಅನುಕೂಲಕ್ಕಾಗಿ ನೂತನ ತಂತ್ರಾಂಶ ಜಾರಿಗೆ ತರಲಾಗಿದೆ. ಅದರಿಂದಾಗಿ ಪ್ರತಿಯೊಬ್ಬರಿಗೂ ಅನುಕೂಲವಾಗಲಿದೆ. ಪ್ರತಿಯೊಬ್ಬ ವರ್ತಕರು ಅಳವಡಿಸಿಕೊಳ್ಳಲು ಮುಂದಾಗುವಂತೆ ಕರೆ ನೀಡಿದರು.ಸಮಾರಂಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಮಹ್ಮದ್ ಮಸ್ಲೇಹುದ್ದೀನ್, ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷ ಮಹಾವೀರ್ ಚಂದ್, ಬಸವರಾಜ ಸೇರಿ ಅನೇಕರಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ವರ್ತಕರು ಹಾಗೂ ವಾಣಿಜ್ಯೋದ್ಯಮಿಗಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.