ವಸತಿ ನಿಲಯ ಪ್ರವೇಶಕ್ಕೆ ಕರೆ
ರಾಯಚೂರು: ಲಿಂಗಸ್ಗೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. ಲಿಂಗಸ್ಗೂರು, ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ವೃತ್ತಿಪರ ಲಿಂಗಸ್ಗೂರು, ಬಾಲಕರ ವಸತಿ ನಿಲಯ ಹಟ್ಟಿ, ಸರ್ಕಾರಿ ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡ ಬಾಲಕರ ವಸತಿ ನಿಲಯ ಲಿಂಗಸ್ಗೂರು ಇಲ್ಲಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಗಳನ್ನು ಪಡೆದು ಜು.15ರೊಳಗೆ ಅರ್ಜಿ ಸಲ್ಲಿಸಬೇಕು. ವಿವರಕ್ಕೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಅಥವಾ ಆಯಾ ವಸತಿ ನಿಲಯಗಳ ಮೇಲ್ವಿಚಾರಕರನ್ನು ಸಂಪರ್ಕಿಸಲು ಕೋರಲಾಗಿದೆ.
ರಾಠೋಡ್ ಈಚನಾಳ ಗ್ರಾಪಂ ಅಧ್ಯಕ್ಷ
ಲಿಂಗಸ್ಗೂರು: ತಾಲೂಕಿನ ಈಚನಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿದ್ದ ಮಹಾಂತೇಶ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ಪ್ರಯುಕ್ತ ತೆರವಾದ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ವೆಂಕಟೇಶ ರಾಠೋಡ್ ಆಯ್ಕೆಗೊಂಡಿದ್ದಾರೆ. ಒಟ್ಟು 17 ಸದಸ್ಯ ಬಲ ಹೊಂದಿದ ಗ್ರಾಪಂನಲ್ಲಿ ಅಧ್ಯಕ್ಷ ಸ್ಥಾನಕ್ಕೆ ರೇಣುಕಾ ನಾಗಪ್ಪ ಹಾಗೂ ವೆಂಕಟೇಶ ರಾಠೋಡ್ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷರ ಆಯ್ಕೆಗೆ ಗುಪ್ತ ಮತದಾನ ನಡೆಸಿದಾಗ 10 ಸದಸ್ಯರು ವೆಂಕಟೇಶ್ ರಾಠೋಡ್ ಅವರನ್ನು ಬೆಂಬಲಿಸಿದರೆ, ರೇಣುಕಾ ನಾಗಪ್ಪರಿಗೆ 7 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಇದರಿಂದ ವೆಂಕಟೇಶ ರಾಠೋಡ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವುದಾಗಿ ಚುನಾವಣಾಧಿಕಾರಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶರಣಬಸಪ್ಪ ಘೋಷಿಸಿದರು. ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಪಂ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಆರ್ಟಿಪಿಎಸ್ 8ನೇ ಘಟಕ ಸ್ಥಗಿತ
ರಾಯಚೂರು: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 8ನೇ ಘಟಕವು ಮಂಗಳವಾರ ತಾಂತ್ರಿಕ ದೋಷದಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದೆ. ವಿದ್ಯುತ್ ಘಟಕದಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದಿದ್ದರಿಂದ ಕೆಪಿಸಿ ಅಧಿಕಾರಿಗಳು ಘಟಕವನ್ನು ಸ್ಥಗಿತಗೊಳಿಸಲು ನಿರ್ಧರಿಸಿದರೆಂದು ಮೂಲಗಳು ತಿಳಿಸಿದ್ದು, ವಿದ್ಯುತ್ ಕೇಂದ್ರದಿಂದ ಮಂಗಳವಾರ ಬೆಳಗ್ಗೆವರೆಗೆ 1 ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

