ನಗರಸಭೆ ಅಧ್ಯಕ್ಷೆ ದೂರು: ಪರಿಶೀಲನೆಗೆ ಡಿಸಿ ಆದೇಶ
ರಾಯಚೂರು: ಇಲ್ಲಿನ ನಗರಸಭೆ ಅಧ್ಯಕ್ಷೆ ಮಹಾದೇವಿ ಅವರು 30 ಜನ ಸದಸ್ಯರ ವಿರುದ್ಧ ನೀಡಿದ ದೂರಿಗೆ ಸಂಬಂಧಿಸಿ ಜಿಲ್ಲಾಧಿಕಾರಿ ಎಸ್. ಎನ್. ನಾಗರಾಜು ಆದೇಶ ಹೊರಡಿಸಿದ್ದು, ನಗರಸಭೆಯ ಪ್ರಮುಖ ದಾಖಲೆಗಳನ್ನು ಜಿಲ್ಲಾಡಳಿತದ ಪರಿಶೀಲನೆಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ಈ ಕುರಿತು ಗುರುವಾರ ಆದೇಶ ಹೊರಡಿಸಿರುವ ಅವರು ನಗರಸಭೆ ಅಧ್ಯಕ್ಷೆ ಮಹಾದೇವಿ ಅವರು ತಮ್ಮ ವಿರುದ್ಧ ಸದಸ್ಯರು ಅವಿಶ್ವಾಸ ವ್ಯಕ್ತಪಡಿಸಿದ್ದಲ್ಲದೇ ಅನಗತ್ಯ ಕಿರುಕುಳ ಹಾಗೂ ರಜೆ ಮೇಲೆ ಕಳಿಸುವ ಹುನ್ನಾರ ನಡೆಸಿದ್ದಾರೆ. ಸದಸ್ಯರು ಅಧ್ಯಕ್ಷರ ಗಮನಕ್ಕೆ ಬಾರದಂತೆ ಸಾಮಾನ್ಯ ಮಹಾಸಭೆಯಲ್ಲಿ ಹೆಚ್ಚುವರಿಯಾಗಿ 41 ಅಂಶಗಳನ್ನು ಸೇರ್ಪಡೆಗೊಳಿಸಿದ್ದಾರೆಂದು ದೂರಿರುವ ಹಿನ್ನೆಲೆಯಲ್ಲಿ ಅಂಥ ಹೆಚ್ಚುವರಿ ವಿಷಯಗಳಿಗೆ ಸಂಬಂಧಿಸಿ ಯಾವುದೇ ರೀತಿಯ ಅನುದಾನ ಪಾವತಿಸದಂತೆ ಪೌರಾಯುಕ್ತರಿಗೆ ಸೂಚಿಸಿದ್ದಾರೆ.
ನಗರಸಭೆಯ 2014ರ ಜ.31ರಂದು ನಡೆದ ಸಾಮಾನ್ಯ ಮಹಾಸಭೆಯಲ್ಲಿ 113 ಅಂಶಗಳು ಮಾತ್ರ ಚರ್ಚೆಯಾಗಿದ್ದು, ಅದಕ್ಕೆ ಹೆಚ್ಚುವರಿಯಾಗಿ 41 ಇನ್ನುಳಿದ ಅಂಶಗಳನ್ನು ಸದಸ್ಯರು ಅಕ್ರಮವಾಗಿ ಸೇರಿಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ಹಾಲಿ ಉಪಾಧ್ಯಕ್ಷೆ ಪದ್ಮಾವತಿ ಅವರು ಎರಡು ತಿಂಗಳ ಅವಧಿಗೆ ಅಧ್ಯಕ್ಷರಾಗಿದ್ದ ಸಮಯದಲ್ಲಿ ಮಂಜೂರಾತಿ ಪಡೆದ ಕಡತಗಳು, ನಗರಸಭೆಯ ಸಾಮಾನ್ಯ ಸಭೆಯ ಠರಾವು ಪುಸ್ತಕ ಜಿಲ್ಲಾಡಳಿತದ ಪರಿಶೀಲನೆಗೆ ಹಾಜರುಪಡಿಸಬೇಕು ಎಂದು ಆದೇಶಿಸಿದ್ದಾರೆ.
ಜಿಲ್ಲಾಡಳಿತದ ಮುಂದಿನ ಆದೇಶದವರೆಗೆ ಪೌರಾಯುಕ್ತರು ಈ ನಿಟ್ಟಿನಲ್ಲಿ ಯಾವುದೇ ರೀತಿಯ ಹಣದ ಪಾವತಿ ಮಾಡದಂತೆಯೂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

