ರಾಯಚೂರು

ಗ್ರಾಮೀಣ ಕ್ರೀಡೆಗೆ ಸರ್ಕಾರದ ಪ್ರೋತ್ಸಾಹ ಅವಶ್ಯ

Published On :

ರಾಯಚೂರು: ನಗರದ ರಾಜೇಂದ್ರ ಗಂಜ್ ಹಮಾಲರ ಸಂಘ, ರೈಸ್ ಮಿಲ್ ಕಸಗೂಡಿಸುವ ಮಹಿಳಾ ಹಮಾಲರ ಸಂಘದಿಂದ ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ಹಮಾಲರಿಗೆ ಉಸುಕಿನ ಚೀಲ ಎತ್ತುವ ಹಾಗೂ ಮಹಿಳೆಯರಿಗೆ ತೂಕದ ಕಲ್ಲು ಹೊತ್ತು ಸಾಗುವ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಪಾಪಾರೆಡ್ಡಿ, ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹಿಸುವುದು ಅವಶ್ಯಕ. ವರ್ಷವಿಡೀ ಬದುಕಿಗಾಗಿ ದುಡಿಯುವ ಹಮಾಲರಿಗೆ ಶಕ್ತಿ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ಮೂಲಕ ಹಾಗೂ ಅವರ ಸಾಮರ್ಥ್ಯಕ್ಕೆ ಸೂಕ್ತ ಬಹುಮಾನ ನೀಡುವ ಉದ್ದೇಶದಿಂದ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಹೇಳಿದರು.
 ರಾಜ್ಯ ಸರ್ಕಾರವು ಗ್ರಾಮೀಣ ಕಲೆ, ಕ್ರೀಡೆಗಳಿಗೆ ಪ್ರೋತ್ಸಾಹಿಸುವ ಕಾರ್ಯ ಮಾಡಬೇಕು. ಹಮಾಲರೂ ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಕಾರ್ಯ ಮಾಡಬೇಕು. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳುವತ್ತ ಹೆಚ್ಚಿನ ಗಮನಹರಿಸಬೇಕೆಂದು ಸಲಹೆ ನೀಡಿದರು. ಹಮಾಲರ ಕ್ಷೇಮಾಭಿವೃದ್ಧಿ ಸಂಘದ ಕಾನೂನು ಸಲಹೆಗಾರ ಹಾಗೂ ಬಿಜೆಪಿ ಮುಖಂಡ ಅಶೋಕ ಗಸ್ತಿ ಮಾತನಾಡಿ, ಗ್ರಾಮೀಣ ಕಲೆ, ಕ್ರೀಡೆಗಳು ಇಂದಿನ ದಿನಮಾನದಲ್ಲಿ ನಶಿಸುತ್ತಿದ್ದು, ಮಾಜಿ ಶಾಸಕ ಪಾಪಾರೆಡ್ಡಿ ನೇತೃತ್ವದಲ್ಲಿ ಇಂಥ ಕಾರ್ಯಕ್ರಮ, ಸ್ಪರ್ಧೆಯನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ಸಮಾರಂಭದಲ್ಲಿ ನಗರಸಭೆ ಸದಸ್ಯ ದೊಡ್ಡಮಲ್ಲೇಶ, ಪಿಎಸ್ಸೈ ಬೇಬಿ ವಾಲಿಕಾರ್ ಮಾತನಾಡಿದರು. ವೇದಿಕೆಯಲ್ಲಿ ಮುನ್ನೂರು ಕಾಪು ಸಮಾಜದ ಶರಣ ತಿಪ್ಪೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.