9ರಂದು ಲಂಕೇಶರ 79ನೇ ಜನ್ಮೋತ್ಸವ ಕಾರ್ಯಕ್ರಮ
ರಾಯಚೂರು: ಬೆಂಗಳೂರು ಮತ್ತು ಮೈಸೂರು ನಗರಗಳಲ್ಲಿ ಆಯೋಜಿಸಲಾಗುತ್ತಿದ್ದ ಪಿ. ಲಂಕೇಶ್ ಅವರ ಜನ್ಮೋತ್ಸವ ಕಾರ್ಯಕ್ರಮವನ್ನು ಈ ಬಾರಿ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾ. 9ರಂದು ಪಿ.ಲಂಕೇಶ್ ಅವರ 79ನೇ ಜನ್ಮೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹಾಂತೇಶ್ ಮಸ್ಕಿ ತಿಳಿಸಿದರು. ನಗರದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಕೆಲ ವರ್ಷಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಚರಿಸಲಾಗುತ್ತಿದ್ದು, ಅದರಂತೆಯೇ ನಗರದಲ್ಲಿ ಈ ಬಾರಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ವಿವಿಧ ಕಾರ್ಯಕ್ರಮ: ಮಾ.9ರಂದು ನಗರದ ರಂಗಮಂದಿರದಲ್ಲಿ ಬೆಳಗ್ಗೆ 10ಕ್ಕೆ ಪಿ.ಲಂಕೇಶ್ ಅವರ 79ನೇ ಜನ್ಮೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಲಂಕೇಶ್ ಬಳಗ, ಲೋಹಿಯಾ ಪ್ರತಿಷ್ಠಾನ, ದಲಿತ ಸಾಹಿತ್ಯ ಪರಿಷತ್ ರಾಯಚೂರು, ಮನುಜಮತ ಬಳಗಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಜನ್ಮೋತ್ಸವದ ಅಂಗವಾಗಿ ವಿಚಾರಗೋಷ್ಠಿಗಳು, ಪುಸ್ತಕಗಳ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಾ. 9ರಂದು ಬೆಳಗ್ಗೆ 10ಕ್ಕೆ ಜನ್ಮೋತ್ಸವದ ಉದ್ಘಾಟನೆಯನ್ನು ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ ನೆರವೇರಿಸಲಿದ್ದಾರೆಂದು ಹೇಳಿದರು.
ಲಂಕೇಶ್ ನೆನಪು: ಅಧ್ಯಕ್ಷತೆಯನ್ನು ಗೌರಿ ಲಂಕೇಶ್ ವಹಿಸುವರು. ಸಿ. ದಾನಪ್ಪ ನಿಲೋಗಲ್ ಅವರು ಪುಸ್ತಕಗಳನ್ನು ಬಿಡುಗಡೆಗೊಳಿಸಲಿದ್ದಾರೆ. ಕನ್ನಡ ವಿವಿ ಹಂಪಿಯ ಡಾ.ರಹಮತ್ ತರೀಕೆರೆ ಅವರು ಪಿ. ಲಂಕೇಶ್ ಒಂದು ನೆನಪು ಕುರಿತು ಮಾತನಾಡಲಿದ್ದಾರೆಂದು ತಿಳಿಸಿದರು. ಕಾರ್ಯಕ್ರಮದ ಕುರಿತು ಕುಮಾರ ಸಮತಳ ಮಾತನಾಡಲಿದ್ದಾರೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

