ರಾಯಚೂರು

ಟಿಪ್ಪರ್ ಹರಿದು ವ್ಯಕ್ತಿ ಸಾವು

Published On :

ರಾಯಚೂರು: ನಗರದ ಗೋಶಾಲಾ ರಸ್ತೆಯ ಮನ್ಸಲಾಪುರ ಕ್ರಾಸ್ ಬಳಿ ಲಾರಿಯೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಆತ ಸಾವಿಗೀಡಾಗಿದ್ದಾನೆ. ಮೃತನನ್ನು ಸೂಗಪ್ಪ(75) ಎಂದು ಗುರುತಿಸಲಾಗಿದೆ. ಈತ ರಸ್ತೆ ಬದಿ ಸಾಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಆತನಿಗೆ ಡಿಕ್ಕಿ ಹೊಡೆದು ಆತನ ಮೇಲೆ ಚಲಿಸಿದ್ದರಿಂದ ತೀವ್ರ ಗಾಯಗೊಂಡ ಆತ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಡಿಕ್ಕಿ: ಸವಾರನ ಸಾವು
ರಾಯಚೂರು: ರಾಯಚೂರು-ಲಿಂಗಸ್ಗೂರು ರಸ್ತೆಯ ಕುಪ್ಪಿಗುಡ್ಡ ಬಳಿ ಬೈಕ್‌ಗೆ ಟ್ರಾಕ್ಟರ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿದ್ದಾನೆ. ಮೃತನನ್ನು ಸೈಯದ್ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಈತ ಬೈಕ್ ಮೇಲೆ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿಯಾಗಿದ್ದರಿಂದ ತಲೆಗೆ ತೀವ್ರ ಪೆಟ್ಟಾಗಿ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಲಿಂಗಸ್ಗೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೈಕ್‌ನಿಂದ ಬಿದ್ದು ಸಾವು
ರಾಯಚೂರು: ಲಿಂಗಸ್ಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಬೈಕ್ ಏರುವಾಗ ಆಯತಪ್ಪಿ ಬಿದ್ದ ಮಹಿಳೆಯೊಬ್ಬಳು ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಮೃತಳನ್ನು ಪಾರ್ವತಮ್ಮ ಎಂದು ಗುರುತಿಸಲಾಗಿದೆ. ಈಕೆ ತನ್ನ ಅಣ್ಣನೊಂದಿಗೆ ತೆರಳಲು ಮೊಬೈಲ್‌ನಲ್ಲಿ ಮಾತನಾಡುತ್ತ ಬೈಕ್ ಏರಿದಾಗ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿದ್ದು, ಚಿಕಿತ್ಸೆಗೆ ರಾಯಚೂರಿನ ಓಪೆಕ್ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೇ ಸಾವಿಗೀಡಾಗಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಮುದಗಲ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಹಾವು ಕಡಿತ: ಬಾಲಕಿ ಸಾವು
ರಾಯಚೂರು: ದೇವದುರ್ಗ ತಾಲೂಕಿನ ಮುದಗೋಟ ಗ್ರಾಮದಲ್ಲಿ ಹಾವು ಕಡಿತದಿಂದ ಬಾಲಕಿಯೊಬ್ಬಳು ಸಾವಿಗೀಡಾಗಿದ್ದಾಳೆ. ಮೃತಳನ್ನು ನಿಂಗಮ್ಮ(15) ಎಂದು ಗುರುತಿಸಲಾಗಿದೆ. ಈಕೆ ರಾತ್ರಿ ವೇಳೆ ಮನೆ ಮುಂದೆ ಮಲಗಿದ್ದಾಗ ಹಾವು ಕಡಿದಿದೆ. ಜಾಲಹಳ್ಳಿ ಆಸ್ಪತ್ರೆಗೆ ಸೇರಿಸಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.