ರಾಯಚೂರು

ನಾಳೆ ದೇವದುರ್ಗ ಸಾಹಿತ್ಯ ಸಮ್ಮೇಳನ

Published On :

ರಾಯಚೂರು: ದೇವದುರ್ಗ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.3 ರಂದು ಆಯೋಜಿಸಲಾಗಿದೆ ಎಂದು ದೇವದುರ್ಗ ತಾಲೂಕು ಕಸಾಪ ಪ್ರಕಟಣೆ ತಿಳಿಸಿದೆ.
ದೇವದುರ್ಗ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮಾ.3ರಂದು ಬೆಳಗ್ಗೆ 8ಕ್ಕೆ ರಾಷ್ಟ್ರಧ್ವಜವನ್ನು ಶಾಸಕ ವೆಂಕಟೇಶ ನಾಯಕ ಹಾಗೂ ಪರಿಷತ್ತಿನ ಧ್ವಜಾರೋಹಣವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಮಹಾಂತೇಶ್ ಮಸ್ಕಿ ನೆರವೇರಿಸಲಿದ್ದಾರೆಂದು ತಿಳಿಸಿದೆ.
ನಂತರ ಸಮ್ಮೇಳನಾಧ್ಯಕ್ಷ ಖೇಣೇದ್ ಮುರಿಗೆಪ್ಪ ಸಾಹು ಅವರ ಮೆರವಣಿಗೆ ನಡೆಯಲಿದ್ದು, ಬೆಳಗ್ಗೆ 10ಕ್ಕೆ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ಸಮ್ಮೇಳನದ ಉದ್ಘಾಟನೆ ಸಮಾರಂಭ ನಡೆಯಲಿದೆ. ಕರ್ನಾಟಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ. ವೀರಣ್ಣ ಉದ್ಘಾಟಿಸಲಿದ್ದಾರೆಂದು ತಿಳಿಸಿದೆ.
ಸ್ಮರಣ ಸಂಚಿಕೆ: ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರು ದೇವಸಿರಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಕೇಂದ್ರ ಕಸಾಪ ಪ್ರಧಾನ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ, ಸಂಸದ ಸಣ್ಣ ಫಕೀರಪ್ಪ, ಶಾಸಕ ವೆಂಕಟೇಶ ನಾಯಕ, ತಾಲೂಕು ಅಧ್ಯಕ್ಷ ನರಸಿಂಗರಾವ್ ಸರ್ಕಿಲ್ ಸೇರಿ ಅನೇಕರು ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮ್ಮೇಳನದ ಮೊದಲ ಗೋಷ್ಠಿ ಮಧ್ಯಾಹ್ನ 12ಕ್ಕೆ ಆಯೋಜಿಸಿದ್ದು ದೇವದುರ್ಗ ತಾಲೂಕಿನ ಸಾಹಿತ್ಯಿಕ ನೆಲೆಗಳು ಎಂಬ ವಿಷಯದ ಕುರಿತು ಭೀಮೋಜಿರಾವ್ ಜಗತಾಪ್, ಜಾನಪದ ಸಾಹಿತ್ಯದಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ಡಾ.ಸುಮಂಗಲಾ ಪತ್ತಾರ, ದಲಿತ ಜನಾಂಗದ ಸ್ಥಿತಿಗತಿ ಒಂದು ಅವಲೋಕನದ ಕುರಿತು ಎಂ.ಆರ್. ಭೇರಿ, ಕೃಷಿಯ ಬಗ್ಗೆ  ಮಲ್ಲಯ್ಯ ಜಾಲಹಳ್ಳಿ ವಿಷಯ ಮಂಡಿಸುವರು.
ಆಶಯ ನುಡಿ: ಗೋಷ್ಠಿಯ ಅಧ್ಯಕ್ಷತೆಯನ್ನು ಅಮರೇಶ ಬಲ್ಲಿದವ್ ವಹಿಸುವರು. ಮುನಿಯಪ್ಪ ನಾಗೋಲಿ ಆಶಯ ನುಡಿಯಾಡಲಿದ್ದಾರೆ. ನಂತರ ಮಧ್ಯಾಹ್ನ 2ಕ್ಕೆ ಮಕ್ಕಳನ್ನು ಕಾಡುತ್ತಿರುವ ಅಪೌಷ್ಟಿಕತೆ ಕುರಿತು ಸಮೂಹ ಸಂಸ್ಥೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಘಂಟಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 2.40ಕ್ಕೆ ಕವಿಗೋಷ್ಠಿ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಗ್ರಾಮೀಣಾಭಿವೃದ್ಧಿಯಲ್ಲಿ ಪತ್ರಿಕೆಗಳ ಪಾತ್ರ ಎಂಬ ವಿಷಯದ ಕುರಿತು ಹಿರಿಯ ಪತ್ರಕರ್ತ ಬಿ. ವೆಂಕಟಸಿಂಗ್ ಉಪನ್ಯಾಸ ನೀಡಲಿದ್ದು, ಸಂಜೆ 4.10ಕ್ಕೆ ಬಹಿರಂಗ ಅಧಿವೇಶನ ನಡೆಯಲಿದೆ. ಅಧಿವೇಶನದ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಮಹಾಂತೇಶ ಮಸ್ಕಿ ವಹಿಸಲಿದ್ದಾರೆ.
ಸಂಜೆ 6ಕ್ಕೆ ಸಮ್ಮೇಳನದ ಸನ್ಮಾನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ.
ಪೂರ್ವಭಾವಿ ಸಭೆ
ದೇವದುರ್ಗ: ಪಟ್ಟಣದಲ್ಲಿ ಮಾ.3ರಂದು ನಡೆಯಲಿರುವ ದೇವದುರ್ಗ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಿನಿ ವಿಧಾನ ಸೌಧದಲ್ಲಿ ಶನಿವಾರ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ತಹಶೀಲ್ದಾರ ಬಸಲಿಂಗಪ್ಪ ನೈಕೋಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಸಾಪ ಅಧ್ಯಕ್ಷ ನರಸಿಂಗರಾವ್ ಸರಕೀಲ್ ಮಾತನಾಡಿ ಮಾ. 3ರಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಾಧ್ಯಕ್ಷರಾಗಿ ಖೇಣೇದ ಮುರಿಗೆಪ್ಪ ಸಾಹು ಆಯ್ಕೆಯಾಗಿದ್ದಾರೆಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.