ರಾಯಚೂರು

ಬಡ'ವರ' ಶೈಕ್ಷಣಿಕ ಪ್ರಗತಿಗೆ ಆರ್‌ಟಿಇ

Published On :

ಕ.ಪ್ರ. ವಾರ್ತೆ ರಾಯಚೂರು  ಮಾ.3
ಆರ್ಥಿಕವಾಗಿ ಹಿಂದುಳಿದಂಥ ಪಾಲಕರ ಪಾಲಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆಯು ವರದಾನವಾಗಿದೆ. ಈ ಕಾಯಿದೆ ಜಾರಿಯಿಂದ ಬಡಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯವಾಗಲಿದೆ ಎಂದು ಜಿಪಂ ಯೋಜನಾಧಿಕಾರಿ ಡಾ. ಟಿ. ರೋಣಿ ಹೇಳಿದರು.
ನಗರದ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸೋಮವಾರ ಏರ್ಪಡಿಸಿದ್ದ ಆರ್‌ಟಿಇ ಅನ್ವಯ ಪ್ರಸಕ್ತ ಸಾಲಿನ ಪ್ರವೇಶ ಪ್ರಕ್ರಿಯೆಯ ಎಲ್‌ಕೆಜಿ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿ, ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾರಿಗೆ ತಂದಿರುವ ಈ ಕಾಯಿದೆಯನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ವಿವಿಧೆಡೆಯ ಖಾಸಗಿ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದು ಸುಲಭದ ಮಾತಲ್ಲ. ಬಡವರ ಪಾಲಿಗೆ ಇದು ಕಷ್ಟಕರ ಸಂಗತಿ. ಈ ನಿಟ್ಟಿನಲ್ಲಿ ಸಮಸ್ಯೆ ಅರಿತ ಸರ್ಕಾರ ಆರ್‌ಟಿಇ ಯೋಜನೆ ಜಾರಿಗೆ ತಂದಿದ್ದು, ಕಡು ಬಡವರ ಮಕ್ಕಳೂ ಸಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನಕ್ಕೆ ತೊಡಗಲು ಅವಕಾಶ ಕಲ್ಪಿಸಿದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಮಲ್ಲಿಕಾರ್ಜುನ ಮಾತನಾಡಿ, ಜಿಲ್ಲೆಯಲ್ಲಿ ಆರ್‌ಟಿಇ ಅಡಿ ಮೂರನೇ ಬಾರಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಕಳೆದ ಎರಡು ವರ್ಷದಲ್ಲಿ ಪ್ರವೇಶ ಪ್ರಕ್ರಿಯೆ ಪಾರದರ್ಶಕವಾಗಿ ನಿರ್ವಹಿಸಲಾಗಿತ್ತು. ಈ ಬಾರಿ ಲಭ್ಯ ಸ್ಥಾನಗಳಿಗಿಂತ ಹೆಚ್ಚಿನ ಅರ್ಜಿಗಳು ಬಂದಿರುವುದರಿಂದ ಲಾಟರಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದರು.
ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಕೃಷ್ಣಮೂರ್ತಿ, ಮುಖ್ಯ ಶಿಕ್ಷಕ ವೆಂಕಟೇಶ, ನೋಡಲ್ ಅಧಿಕಾರಿ ಅಮರೇಗೌಡ ಸೇರಿ ಪಾಲಕರು, ವಿದ್ಯಾರ್ಥಿಗಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.