ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ
ಲಿಂಗಸ್ಗೂರು ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಗೋದಾಮಿನಲ್ಲಿ ಒಣ ಕಡಲೆ ಖರೀದಿ ಕೇಂದ್ರ ಆರಂಭಕ್ಕೆ ಸಹಾಯಕ ಆಯುಕ್ತ ಟಿ.ಯೋಗೇಶ್ ಸೋಮವಾರ ಚಾಲನೆ ನೀಡಿದರು.
ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕಡಲೆ ಕಾಳು ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯನ್ನು ನಾಫೇಡ್ ಪರವಾಗಿ ಖರೀದಿ ಏಜೆನ್ಸಿ ನೇಮಕ ಮಾಡಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಸಿ ಯೋಗೇಶ್ ಮನವಿ ಮಾಡಿದರು.
ಇದೇ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಮಾತನಾಡಿ, ತಾಲೂಕಿನ ರೈತರು ಒಣ ಕಡಲೆ ಬೆಂಬಲ ಬೆಲೆಗಿಂತ ಕಡಿಮೆಯಾಗಿದೆ. ಪ್ರಸ್ತುತ ಕಡಲೆ ಪ್ರತಿ ಕ್ವಿಂಟಾಲ್ಗೆ ರು. 3100 ರಂತೆ ಖರೀದಿಸುವುದು ಸರಿಯಲ್ಲ. ಕೇಂದ್ರ ಸರ್ಕಾರದ ದರ ರು. 3200 ಇದೆ. ಇದಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ಕೊಟ್ಟು ಖರೀದಿಸಬೇಕು. ರೈತರು ಮಾರಾಟಕ್ಕೆ ಬಂದರೆ ಖಾಲಿ ಚೀಲ ತೆಗೆದುಕೊಂಡು ಬರುವಂತೆ ಅಧಿಕಾರಿಗಳು ಹೇಳುತ್ತಾರೆ. ರೈತರು ಖಾಲಿ ಚೀಲ ತರಲು ಸಾಧ್ಯವಿಲ್ಲ. ಮಂಡಳಿಯವರೇ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ವೇಳೆ ಎಪಿಎಂಸಿ ಅಧ್ಯಕ್ಷ ಚನ್ನವೀರಪ್ಪಗೌಡ ಪಾಗದ್, ನಿರ್ದೇಶಕರಾದ ಸಂಗಣ್ಮ ದೇಸಾಯಿ, ಶರಣಬಸವ ಹೊನ್ನಳ್ಳಿ, ಎಪಿಎಂಸಿ ಕಾರ್ಯದರ್ಶಿ ಎಂ. ರಂಗಪ್ಪ, ಸಹಕಾರ ಮಂಡಳಿ ಅಧಿಕಾರಿ ಭಗವಂತರಾವ್ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

