ವೈಜ್ಞಾನಿಕ ಭಾವನೆಯಿಂದ ಜೀವನ ಸುಧಾರಣೆ ಸಾಧ್ಯ
ಕ.ಪ್ರ. ವಾರ್ತೆ ಸಿಂಧನೂರು ಮಾ.4
ಇಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮೂಢನಂಬಿಕೆಗಳು ಹೆಚ್ಚಾಗುತ್ತಿದ್ದು, ಅವೆಲ್ಲವನ್ನೂ ತಿರಸ್ಕರಿಸಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯಿಂದ ಜೀವನ ಸುಧಾರಿಸಿಕೊಳ್ಳಬೇಕೆಂದು ಬಿಆರ್‌ಪಿ ಆದೆಪ್ಪ ಹೆಂಬಾ ಹೇಳಿದರು.
ತಾಲೂಕಿನ ಬೆಳಗುರ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಅಲಬನೂರು ವಲಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಅನೇಕ ಮೂಢನಂಬಿಕೆಗಳು ಆಚರಣೆಯಲ್ಲಿದ್ದು ಅವುಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಮಾತ್ರವೇ ತಡೆಹಿಡಿಯಬಹುದು. ಶಾಲೆಯಲ್ಲಿ ಕಲಿಯುವ ಮಕ್ಕಳೆಲ್ಲಾ ತಮ್ಮ ಮನೆಗಳಲ್ಲಿ ಸ್ವಚ್ಛ ಪರಿಸರವನ್ನು ಕಾಪಾಡಿಕೊಳ್ಳಬೇಕು. ಪ್ರಪಂಚ ಇಂದು ನಾಗಲೋಟದಿಂದ ಹೊಸ ಅವಿಷ್ಕಾರಗಳತ್ತ ಸಾಗುತ್ತಿರುವಾಗ ನಾವಿನ್ನೂ ಮೂಢನಂಬಿಕೆಗಳಲ್ಲೇ ನಮ್ಮ ಜೀವನ ಕಳೆಯಬಾರದು ಎಂದರು.
ಮೆಚ್ಚುಗೆ: ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಿಆರ್‌ಪಿ ಮಲ್ಲಪ್ಪ, ಶಾಲೆಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಹೆಚ್ಚಿಸುವ ಇಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕು. ಸ್ವಂತ ಆಸಕ್ತಿಯಿಂದ ರಸಪ್ರಶ್ನೆ ಕಾರ್ಯಕ್ರಮವನ್ನು ಸಂಘಟಿಸಿದ ಬೆಳಗುರ್ಕಿಯ ಶಾಲೆಯ ಶಿಕ್ಷಕರಿಗೆ ಅಭಿನಂದನೆಗಳು ಎಂದರು.
ಕಾರ್ಯಕ್ರಮದಲ್ಲಿ ಅಲಬನೂರು ವಲಯದ ವಿವಿಧ ಶಾಲೆಗಳ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಸ.ಹಿ.ಪ್ರಾ. ಶಾಲೆ ಬೆಳಗುರ್ಕಿ ದ್ವಿತೀಯ ಸ್ಥಾನವನ್ನು ಸ.ಹಿ.ಪ್ರಾ. ಶಾಲೆ ಗೋಮರ್ಸಿ, ತೃತೀಯ ಸ್ಥಾನವನ್ನು ಸ.ಹಿ.ಪ್ರಾ. ಶಾಲೆ ಮಾಡಶಿರವಾರ ಪಡೆದುಕೊಂಡರು. ವಿಜೇತರಾದವರಿಗೆ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ವಿತರಿಸಲಾಯಿತು. ಮುಖ್ಯ ಶಿಕ್ಷಕ ಶಂಕರರಾವ್, ಶಿಕ್ಷಕರಾದ ಪುಟ್ಟಸ್ವಾಮಿ, ಪರಮೇಶ, ಕೊಟ್ರೇಶ ಬಿ., ರಾಜು, ಮಲ್ಲೇಶ ಬಿ.ಕೆ., ಮೀನಾಕ್ಷಿ, ಮಲ್ಲೇಶ ಗೋಮರ್ಸಿ ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

