ರಾಯಚೂರು

ನೀರು ಶೇಖರಣೆ ವಸ್ತುಗಳನ್ನು ಸದಾ ಸ್ವಚ್ಛವಾಗಿಡಿ: ನಾಯಕ

Published On :

ಸಿಂಧನೂರು: ಮನೆಯಲ್ಲಿನ ನೀರು ತುಂಬುವ ಡ್ರಮ್, ಬ್ಯಾರಲ್, ಕಲ್ಲಿನ ಡೋಣಿ ಮುಂತಾದವುಗಳನ್ನು ವಾರದಲ್ಲಿ ಎರಡು ಬಾರಿ ಸ್ವಚ್ಛಗೊಳಿಸಿ ನೀರು ತುಂಬುವುದರಿಂದ ಸೊಳ್ಳೆಗಳ ಉತ್ಪತ್ತಿ ತಡೆಯುವುದರ ಜೊತೆಗೆ ಡೆಂಘೀ ಸೇರಿದಂತೆ ಸೊಳ್ಳೆಯಿಂದ ಹರಡುವ ಇತರ ರೋಗಗಳನ್ನು ನಿಯಂತ್ರಿಸಬಹುದು ಎಂದು ಜಿಲ್ಲಾ ಕೀಟ ಶಾಸ್ತ್ರಜ್ಞ ಪರಶುರಾಮ ನಾಯಕ ತಿಳಿಸಿದರು.
ತಾಲೂಕಿನ ಆರ್.ಎಚ್ ನಂ-2 ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿಗಳ ಕಾರ್ಯಾಲಯ ರಾಯಚೂರು, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಸಿಂಧನೂರು, ಪ್ರಾ.ಆ. ಕೇಂದ್ರ ಆರ್.ಎಚ್. ನಂ-2 ಹಾಗೂ ಶಿಕ್ಷಣ ಇಲಾಖೆಗಳ ಆಶ್ರಯದಲ್ಲಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಡೆಂಘೀ ರೋಗ ನಿಯಂತ್ರಣ ಕುರಿತ ಚರ್ಚಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಅಥಿತಿಗಳಾಗಿ ಮಾತನಾಡಿದರು. ಡೆಂಘೀ ಬಂದಾಗ, ರಕ್ತದಲ್ಲಿರುವ ಪ್ಲೇಟ್ಲೆಟ್‌ಗಳ ಕೊರತೆಯಾಗುವುದೆಂಬ ವದಂತಿ ಜನಸಾಮಾನ್ಯರಲ್ಲಿ ಹರಡಿದೆ. ಆದರೆ ಪ್ಲೇಟ್ಲೆಟ್ ಕಡಿಮೆಯಾದ ರೋಗಿಗಳಿಗೆ ವೈದ್ಯರು ನೀಡುವ ಐ.ವಿ. ದ್ರಾವಣದಿಂದ ತಕ್ಷಣ ಪ್ಲೇಟ್ಲೆಟ್‌ಗಳ ಪ್ರಮಾಣ ಹೆಚ್ಚಾಗಿ, ರೋಗಿಯು ಚೇತರಿಸಿಕೊಳ್ಳುತ್ತಾನೆ ಎಂದು ತಿಳಿಸಿದರು.
ಎಚ್ಚರ ವಹಿಸಿ: ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಎಸ್.ಎಸ್. ಸುಂಕದ, ನೀರು ಖಾಲಿ ಮಾಡಲು ಸಾಧ್ಯವಿಲ್ಲದ ತೊಟ್ಟಿ ಮುಂತಾದವುಗಳನ್ನು ಸೊಳ್ಳೆಗಳು ಒಳಗೆ ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚುವುದು. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದರಿಂದ ಡೆಂಘೀ ನಿಯಂತ್ರಿಸಬಹುದು ಎಂದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ಎಚ್. ದಾಸಪ್ಪನವರ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ರೇಖಾ ವಿ. ನಾವಾಳ್ಳಿ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.