ಮಾಧ್ಯಮದವರ ಮೇಲೆ ಪಿಎಸ್ಸೈ ಹಲ್ಲೆ; ಖಂಡನೆ
ರಾಯಚೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪೊಲೀಸ್ ಠಾಣೆಗೆ ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆ ಪಿಎಸ್ಸೈ ಅನಾವಶ್ಯಕವಾಗಿ ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಪತ್ರಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಗೃಹ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮನವಿ ಸಲ್ಲಿಸಿ, ಹಿರಿಯೂರು ಪಟ್ಟಣದ ಪೊಲೀಸ್ ಠಾಣೆಯ ಪಿಎಸ್ಸೈ ಅವರು ವರದಿ ಮಾಡಲು ತೆರಳಿದ್ದ ವಾಹಿನಿಯೊಂದರ ಕ್ಯಾಮೆರಾಮೆನ್ ಮೇಲೆ ಹಲ್ಲೆ ಮಾಡಿ ಕ್ಯಾಮೆರಾ ಧ್ವಂಸಗೊಳಿಸಿದ್ದಾರೆಂದು ಆರೋಪಿಸಿದರು.
ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ: ಪತ್ರರ್ಕತರು ಹಾಗೂ ಪೊಲೀಸರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕಾರ್ಯ ಮಾಡುತ್ತಾರೆ. ಆದರೆ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವ ಈ ಸಂದರ್ಭದಲ್ಲಿ ಹಿರಿಯೂರು ಘಟನೆ ಪೊಲೀಸ್ ಇಲಾಖೆಯ ಪಾಲಿಗೆ ಕಪ್ಪುಚುಕ್ಕೆಯಾಗಿದೆ ಎಂದು ಟೀಕಿಸಿದರು.
ಪಿಎಸ್ಸೈ ಭಾಸ್ಕರ ಅವರ ವರ್ತನೆ ಭಯದ ವಾತಾವರಣ ಸೃಷ್ಟಿಸುವ ತಂತ್ರವಾಗಿದೆ. ಇಂಥ ಘಟನೆಗಳು ರಾಜ್ಯದಲ್ಲಿ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಘಟನೆಗೆ ಕಾರಣವಾಗಿರುವ ಪಿಎಸ್ಸೈ ಭಾಸ್ಕರ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಜಯರಾಮ, ಪತ್ರಕರ್ತರಾದ ಭೀಮರಾಯ ಹದ್ದಿನಾಳ, ಬಸವರಾಜ ನಾಗಡದಿನ್ನಿ, ಶಿವಪ್ಪ ಮಡಿವಾಳರ, ವಿಜಯಕುಮಾರ್, ಖಾನಸಾಬ್ ಮೋಮಿನ್, ರಾಮಕೃಷ್ಣ ದಾಸರಿ, ಶ್ರೀನಿವಾಸ್, ಸುರೇಶ್, ಮುತ್ತಣ್ಣ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

