ರಾಯಚೂರು

ಶಿವಾನುಭವಗೋಷ್ಠಿ

Published On :

ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಬೂದಿಬಸವೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಮಾಸಿಕ ಶಿವಾನುಭವಗೋಷ್ಠಿ ಆಯೋಜಿಸಲಾಗಿತ್ತು. ಶ್ರೀಮಠದ ಬೂದಿಬಸವೇಶ್ವರ ಶಿವಾಚಾರ್ಯರ ನೇತೃತ್ವದಲ್ಲಿ ನಡೆದ ಶಿವಾನುಭವಗೋಷ್ಠಿಯಲ್ಲಿ ದೊಡ್ಡಣ್ಣ ಹಿರೇಮನ್ನಾಪುರ ಭಕ್ತಿಸ್ಥಳದ ಕುರಿತು ಉಪನ್ಯಾಸ ನೀಡಿದರು. ಎಲ್‌ವಿಡಿ ಕಾಲೇಜಿನ ಉಪನ್ಯಾಸಕಿ ಮುಕ್ತಾ ವಿ. ಪಾಟೀಲ್ ವಚನ ಸಂಗೀತ ಪ್ರಸ್ತುತಪಡಿಸಿದರು. ಪ್ರಭಯ್ಯ ತಾತಾ, ಸದಾಶಿವಪ್ಪಗೌಡ, ಈರಣ್ಣಗೌಡ, ಬಸವರಾಜ ಸಾಹು ಸೇರಿದಂತೆ ಅನೇಕರಿದ್ದರು. ಗಬ್ಬೂರು ಹಾಗೂ ಸುತ್ತಲಿನ ವಿವಿಧೆಡೆಯಿಂದ ಗ್ರಾಮಸ್ಥರು ಹಾಗೂ ಶ್ರೀಮಠದ ಭಕ್ತರು ಆಗಮಿಸಿ ಶಿವಾನುಭವಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
ಎಂಡಿಎಸ್‌ನಲ್ಲಿ 2ನೇ ರ್ಯಾಂಕ್
ರಾಯಚೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಕಳೆದ ಮೇ ತಿಂಗಳಿನಲ್ಲಿ ನಡೆಸಿದ ಎಂಡಿಎಸ್(ಆರ್ಥೋ ಡಾಂಟಿಕ್ಸ್) ವಿಭಾಗದ ಪರೀಕ್ಷೆಯಲ್ಲಿ ನಗರದ ಎಎಂಇ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿ ಡಾ. ಶರ್ಮಿಲಾ ಅರ್ಜುನನ್ ದ್ವಿತೀಯ ರ್ಯಾಂಕ್ ಗಳಿಸಿದ್ದಾರೆ.
ಈ ಕುರಿತು ಕಾಲೇಜಿನ ಪ್ರಾಚಾರ್ಯರು ಪ್ರಕಟಣೆ ನೀಡಿದ್ದು, ಮಾರ್ಚ್ ಅಂತ್ಯಕ್ಕೆ ನಡೆಯಲಿರುವ ರಾಜೀವ್ ಗಾಂಧಿ ಆರೋಗ್ಯ ವಿವಿಯ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿ ಡಾ. ಶರ್ಮಿಲಾ ಅರ್ಜುನನ್ ಅವರಿಗೆ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಬೋಧಕ ವರ್ಗ ಮತ್ತು ಆಡಳಿತ ಮಂಡಳಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.