ರಾಯಚೂರು

ಆಡಳಿತದಲ್ಲಿ ಸ್ತ್ರೀಯರೂ ಸಶಕ್ತರು

Published On :

ರಾಯಚೂರು: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಜಿಲ್ಲಾ ಘಟಕ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಎನ್ನೆಸ್ಸೆಸ್ ಘಟಕ ಹಾಗೂ ವಿದ್ಯಾರ್ಥಿ ಕಲ್ಯಾಣ ಸಂಘಗಳ ಸಂಯುಕ್ತಾಶ್ರಯದಲ್ಲಿ ಈಚೆಗೆ ನಗರದಲ್ಲಿ ಅಂತಾರಾಪ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ರಾಜ್ಯ ಸಂಚಾಲಕಿ ಅಪರ್ಣಾ ಬಿ.ಆರ್. ಮಾತನಾಡಿ, ಸಮಾಜದಲ್ಲಿ ಊಳಿಗಮಾನ್ಯ ಮೌಲ್ಯಗಳ ಜತೆಜತೆಗೆ ಪುರುಷ ಪ್ರಧಾನ ಮನೋಭಾವ ವ್ಯಾಪಕವಾಗಿ ಹರಡಿದ್ದು, ಗ್ರಾಮೀಣ ಹಾಗೂ ನಗರ ಜೀವನದ ಸಾಮಾಜಿಕ-ಸಾಂಸ್ಕೃತಿಕ ಬದುಕನ್ನು ನಿಯಂತ್ರಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ವಾಗಿ ಪಾಲ್ಗೊಂಡು ತಮ್ಮ ಪಾತ್ರ ನಿರ್ವಹಿಸಲು ಸಶಕ್ತರಾಗಿದ್ದಾರೆ. ಅವರೂ ಎಲ್ಲ ಕ್ಷೇತ್ರಗಳಲ್ಲಿ ಪುರುಷನಿಗೆ ಸಮಬಲಳಾಗಿ ನಿಂತು ಕಾರ್ಯ ನಿರ್ವಹಿಸಬಲ್ಲಳು. ಇದಕ್ಕೆ ಬೇಕಾದ ಪೂರಕ ವಾತಾವರಣ ನಿರ್ಮಾಣವಾಗಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯೆ ಡಿ.ಟಿ. ದೇವಿ ವಹಿಸಿ ಮಾತನಾಡಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ನೀಲಕಂಠ, ಎಐಎಂಎಸ್ಸೆಸ್ ಜಿಲ್ಲಾಧ್ಯಕ್ಷೆ ಚೇತನಾ ಬನಾರೆ ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ದೇವೇಂದ್ರಪ್ಪ, ಸಂಘಟನೆ ಜಿಲ್ಲಾ ಕಾರ್ಯದರ್ಶಿ ಸರೋಜಾ ಗೋನವಾರ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.