ಜನತೆಗೆ ಸರ್ಕಾರದ ಸಾಧನೆ ತಿಳಿಸಿ: ಬಾದರ್ಲಿ
ಸಿಂಧನೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿರುವ ಸಾಧನೆ ಹಾಗೂ ಯೋಜನೆಗಳನ್ನು ಮನೆ-ಮನಗಳಿಗೆ ಮುಟ್ಟಿಸಲು ಕಾರ್ಯಕರ್ತರು ಮುಂದಾಗಬೇಕೆಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು.
ನಗರದ ಶಾದಿ ಮಹಲ್ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿ ರೈತರಿಗೆ, ಬಡವರಿಗೆ, ಅಲ್ಪಸಂಖ್ಯಾತರಿಗೆ, ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದೆ. ಉದ್ಯೋಗ ಖಾತ್ರಿ ಯೋಜನೆ, ಕಡ್ಡಾಯ ಶಿಕ್ಷಣ ಕಾಯ್ದೆ ಸೇರಿದಂತೆ ಹತ್ತಾರು ಜನಪ್ರಿಯ ಯೋಜನೆಗಳನ್ನು ದೇಶದ ಜನತೆಗೆ ಕೇಂದ್ರ ಸರ್ಕಾರ ನೀಡಿದೆ ಎಂದರು.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿ ಮಾಡಿದೆ. ಕೊಪ್ಪಳ ಕ್ಷೇತ್ರದಿಂದ ಯಾರೇ ಸ್ಪರ್ಧಿಸಿದರೂ ಕಾರ್ಯಕರ್ತರು ಸಮರೋಪಾದಿಯಲ್ಲಿ ದುಡಿಯಬೇಕಿದೆ ಎಂದರು.
ಪದಗ್ರಹಣ: ಕಾರ್ಯಕ್ರಮದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಖಾಜಿ ಮಲ್ಲಿಕ್ ಪದಗ್ರಹಣ ಮಾಡಿದರು. ನಗರಸಭಾ ಅಧ್ಯಕ್ಷ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಕಟಪೂರ್ವ ಅಧ್ಯಕ್ಷ ಜಾಫರ ಜಾಹಗೀರದಾರ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ವೇಳೆ ಕೆಪಿಸಿಸಿ ಸದಸ್ಯರಾದ ಎನ್.ಶಿವನಾಗಪ್ಪ, ತಿಮ್ಮಯ್ಯ ನಾಯಕ, ಎಂ.ಕಾಳಿಂಗಪ್ಪ, ಗ್ರಾಮ್ಮೀಪಾಷಾ, ಲಿಂಗರಾಜ ಹಂಚಿನಾಳ, ಜಿಪಂ ಸದಸ್ಯರಾದ ಚಂದೂಸಾಬ್, ತಾಪಂ ಅಧ್ಯಕ್ಷೆ ಬಸಮ್ಮ ಕೊಟ್ರಪ್ಪ, ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ, ಎಪಿಎಂಸಿ ಅಧ್ಯಕ್ಷ ಸಣ್ಣ ಕರಿಯಪ್ಪ, ವೆಂಕಟರೆಡ್ಡಿ, ತಾಪಂ ಸದಸ್ಯರು, ನಗರಸಭಾ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

