ರಾಯಚೂರು

ಮಹಿಳಾ ದಿನಾಚರಣೆ ಯಶಸ್ವಿ

Published On :

ರಾಯಚೂರು: ನಗರದ ಎಸ್‌ಎಸ್‌ಆರ್‌ಜಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿತ್ತು.
ಕೃಷಿ ವಿವಿ ಪ್ರಾಧ್ಯಾಪಕಿ ಡಾ. ಜಾಗೃತಿ ದೇಶಮಾನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಹಿಂದೊಮ್ಮೆ ಮಹಿಳೆ ಕೇವಲ ನಾಲ್ಕು ಗೋಡೆಗಳ ಮಧ್ಯೆ ಜೀವನ ನಡೆಸುತ್ತಿದ್ದಳು. ಆದರೆ ಇಂದು ಮಹಿಳೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮೆರೆಯುತ್ತಿದ್ದಾಳೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಯುವತಿಯರು ಶಿಕ್ಷಣದ ಮೂಲಕ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಅರಿಯಬೇಕಿದೆ. ಸಮಾಜದಲ್ಲಿ ಉನ್ನತವಾದದ್ದನ್ನು ಸಾಧಿಸುವ ಮೂಲಕ ಖ್ಯಾತಿ ಗಳಿಸಬೇಕು. ಈ ನಿಟ್ಟಿನಲ್ಲಿ ಕಲ್ಪನಾ ಚಾವ್ಲಾ, ಸುನೀತಾ ವಿಲಿಯ್ಸಂ, ತಸ್ಲೀಮಾ ನಸ್ರೀನ್ ಸೇರಿ ಅನೇಕ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದಾರೆಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನಗರಸಭೆ ಪ್ರಭಾರಿ ಅಧ್ಯಕ್ಷೆ ಪದ್ಮಾ ಶ್ರೀನಿವಾಸ್ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆಗೆ ತಡೆಯೊಡ್ಡಬೇಕು. ಮಹಿಳೆಯರೆಲ್ಲರೂ ಶಿಕ್ಷಣ ಪಡೆಯಬೇಕು. ಸಮಾಜದಲ್ಲಿ ಸಮಾನತೆ ಪಡೆಯಲು ಮಹಿಳೆಯರು ಹೋರಾಡುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ನಂದಗೋಪಾಲ್ ವಹಿಸಿ ಮಾತನಾಡಿದರು. ಎಫ್‌ಪಿಎಐ ಸದಸ್ಯ ಈರಮ್ಮ ಪಾಲ್ಗೊಂಡಿದ್ದರು. ಮಹಿಳಾ ದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ರಂಗೋಲಿ, ಖೋಖೋ, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇಂದು ರಕ್ತದಾನ ಶಿಬಿರ
ರಾಯಚೂರು: ನಗರದ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದಲ್ಲಿ ಮಾ.11ರಂದು ಎನ್ನೆಸ್ಸೆಸ್‌ನ ರೆಡ್ ರಿಬ್ಬನ್ ಕ್ಲಬ್ ಮತ್ತು ಯುವರೆಡ್ ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ರಕ್ತದ ಗುಂಪು ಪರೀಕ್ಷೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಬೆಳಗ್ಗೆ 9ಕ್ಕೆ ಎಸ್‌ಎಸ್‌ಎಂ ಮಹಾವಿದ್ಯಾಲಯದಲ್ಲಿ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರಕ್ತ ಭಂಡಾರದ ವೈದ್ಯಾಧಿಕಾರಿ ಡಾ. ಪ್ರಸನ್ನ, ಜಿಲ್ಲಾ ಐಸಿಟಿಸಿ ಮೇಲ್ವಿಚಾರಕ ಮಲ್ಲಯ್ಯ ಮಠಪತಿ, ರೆಡ್‌ಕ್ರಾಸ್ ಪ್ರಧಾನ ಕಾರ್ಯದರ್ಶಿ ವಿದ್ಯಾಸಾಗರ್ ಚಿಣಮಗೇರಿ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಮಾಲಿಪಾಟೀಲ್ ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.