ಶಾಂತಿಯುತ ಚುನಾವಣೆಗೆ ಸಹಕರಿಸಿ
ಕ.ಪ್ರ. ವಾರ್ತೆ ದೇವದುರ್ಗ್ಣ ಮಾ.11
ಜಿಲ್ಲೆಯಲ್ಲಿ ಏ.17ರಂದು ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಶಾಂತಿಯುತ ಮತ್ತು ಸಮರ್ಪಕವಾಗಿ ನಡೆಸುವಂತಾಗಲು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಆಡಳಿತಕ್ಕೆ ಸಹಕರಿಸುವಂತೆ ಸಹಾಯಕ ಚುನಾವಣಾಧಿಕಾರಿ ಡಾ. ಉಮೇಶ ಮನವಿ ಮಾಡಿದರು.
ಇಲ್ಲಿನ ಮಿನಿ ವಿಧಾನಸೌಧದಲ್ಲಿ ಮಂಗಳವಾರ ಕರೆದಿದ್ದ ರಾಜಕೀಯ ಪಕ್ಷದ ಪದಾಧಿಕಾರಿಗಳ, ಮತ್ತು ಸಂಘ ಸಂಸ್ಥೆಗಳ ಸಭೆಯಲ್ಲಿ ಮಾತನಾಡಿ, ಈಗಾಗಲೇ ನೀತಿ ಸಂಹಿತಿ ಜಾರಿಯಲ್ಲಿದೆ. ಯಾವುದೇ ರಾಜಕೀಯ ಪಕ್ಷಗಳು ಸಭೆ- ಸಮಾರಂಭ ಆಯೋಜಿಸಲು ಅಧಿಕಾರಿಗಳಿಗೆ ಮಾಹಿತಿ ನೀಡಿ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು ಎಂದರು.
ಪರವಾನಗಿ ಕಡ್ಡಾಯ: ಗ್ರಾಪಂ ವ್ಯಾಪ್ತಿಯಲ್ಲಿ ಸಹ ಬ್ಯಾನರ್ಸ್, ಕರಪತ್ರ, ಚುನಾವಣೆಗೆ ಸಂಬಂಧಿಸಿದ ಇತರೆ ಪ್ರಚಾರ ಕೈಗೊಳ್ಳಲು ಪರವಾನಗಿ ಪಡೆಯುವುದು ಅತ್ಯವಶ್ಯಕ. ರಾಜಕೀಯ ಪಕ್ಷಗಳು ತಮ್ಮ ಪ್ರಚಾರಕ್ಕೆ ದೇವಾಲಯ, ಪ್ರಾರ್ಥನಾ ಮಂದಿರಗಳನ್ನು ಬಳಸುವಂತಿಲ್ಲ ಎಂದು ಎಚ್ಚರಿಸಿದರು.
ಸಭೆಯಲ್ಲಿ ಮಾತನಾಡಿದ ಸಿಪಿಐ ರಮೇಶ್ ಮೇಟಿ, ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಜಾರಿಯಲ್ಲಿದ್ದು, ಮತದಾರರ ಪಟ್ಟಿಯಲ್ಲಿ ಲೋಪದೋಷ ತಿದ್ದುಪಡಿ, ಹೆಸರು ಸೇರ್ಪಡೆಗೆ ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ತಾಪಂ ಇಒ ಬಿ.ಬಿ. ಕುಲಕರ್ಣಿ, ಪುರಸಭೆ ಮುಖ್ಯಾಧಿಕಾರಿ ಸುಜಾತಾ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮನಗೌಡ ನಾಗಡದಿನ್ನಿ, ಬಸಯ್ಯ ಶಾಖೆ, ಹುಸೇನಸಾಬ ನೀಲವಂಜಿ, ಬಿಜೆಪಿ ತಾಲೂಕಾಧ್ಯಕ್ಷ ಜಂಬಣ್ಣ ನಿಲೋಗಲ್, ಜೆಡಿಎಸ್ ಮುಖಂಡ ರಾಘವೇಂದ್ರ ಕೋಲ್ಕಾರ, ಕೆಜೆಪಿ ಅಧ್ಯಕ್ಷ ಭೀಮಸೇನರಾವ್ ಪಾಟೀಲ್, ಮಹ್ಮದ ಯೂನೂಸ್ ಶಹಾಪೂರಿ ಸೇರಿ ಅನೇಕರಿದ್ದರು.
ದೂರು ದಾಖಲೆ ಕೇಂದ್ರ ಆರಂಭ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಸಂದರ್ಭ ಚುನಾವಣಾ ದೂರು ಸ್ವೀಕರಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕೇಂದ್ರ ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಪ್ರಯೋಜನ ಪಡೆಯುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಸಾರ್ವಜನಿಕರು ದೂರುಗಳನ್ನು 1950 ಅಥವಾ 08532- 227077ಇಲ್ಲಿಗೆ ಸಂಪರ್ಕಿಸಿ ದೂರು ನೀಡಬಹುದಾಗಿದೆ. ಈ ದೂರು ವಿಭಾಗವು ವಾರದ ಎಲ್ಲ ದಿನವೂ ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

