ರಾಯಚೂರು

ಆಲಿಕಲ್ಲು ಮಳೆಗೆ ಬೆಳೆ ಹಾನಿ: ವರದಿ ಸಲ್ಲಿಕೆ

Published On :

ಲಿಂಗಸ್ಗೂರು: ತಾಲೂಕಿನಲ್ಲಿ ಇತ್ತಿಚಿಗೆ ಸುರಿದ ಅಕಾಲಿಕ ಆಲಿಕಲ್ಲು ಮಳೆ ಹಾಗೂ ಗಾಳಿಯಿಂದ ತೋಟಗಾರಿಕೆ ಬೆಳೆಗಳು ಹಾನಿಗೀಡಾದ ಕುರಿತು ಸಮಗ್ರ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ.ಎಲ್. ಮಹೇಶ್ವರ್ ಹೇಳಿದರು.
ತಾಲೂಕಿನ ಅಮರೇಶ್ವರದ ಚಂದ್ರಶೇಖರಪ್ಪ ಭೋಗಾಪುರ ಅವರು 7.13 ಎಕರೆ ಜಮೀನಿನಲ್ಲಿ ಬೆಳೆದ ಪಪ್ಪಾಯ ತೋಟಕ್ಕೆ ಭೇಟಿ ನೀಡಿ ಹಾನಿಗೀಡಾದ ಕುರಿತು ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಸುರಿದ ಆಲಿಕಲ್ಲು ಮಳೆಯಿಂದ ರೈತರು ಬೆಳೆದ ಪಪ್ಪಾಯಿ, ದಾಳಿಂಬೆ, ದ್ರಾಕ್ಷಿ, ನಿಂಬೆ ಸೇರಿದಂತೆ ತೋಟಗಾರಿಕೆ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಬೆಳೆ ಹಾನಿ ವೀಕ್ಷಿಸಿ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ.
ಸಂಕಷ್ಟದಲ್ಲಿರುವ ರೈತರಿಗೆ ಇಲಾಖೆ ಸಂಪೂರ್ಣ ಸಹಕಾರ ನೀಡಲಿದ್ದು, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬಿಜಾಪುರ ಜಿಲ್ಲೆಗಳ ಪ್ರವಾಸ ಕೈಗೊಂಡು ಹಾನಿಯಾದ ಬೆಳೆ ಕುರಿತು ವೀಕ್ಷಣೆ ನಡೆಸಿದ್ದಾರೆ. ಲೋಕಸಭೆ ಚುನಾವಣೆ ಮುಕ್ತಾಯಗೊಂಡ ನಂತರ ಹಾನಿಗೀಡಾದ ರೈತರಿಗೆ ಸರ್ಕಾರದಿಂದ ಪರಿಹಾರ ಒದಗಿಸಲಾಗುವುದು ಎಂದರು. ಈ ವೇಳೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ, ಸಹಾಯಕ ನಿರ್ದೇಶಕ ಅಮೋಗಿ ಹಿರೇಕುರಬರ, ಮುಖಂಡರಾದ ಎಚ್.ಬಿ. ಮುರಾರಿ, ಅಮರಣ್ಣ ಗುಡಿಹಾಳ, ಶರಣಗೌಡ ಬಸಾಪೂರ, ಉಮೇಶ, ಚಂದ್ರಶೇಖರಪ್ಪ, ಪ್ರಭುಲಿಂಗ ಮೇಗಳಮನಿ, ಮಹಾಂತೇಶ ಗೌಡರ್, ಅಮರೇಶ, ರುದ್ರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.