ಕ್ಷೇತ್ರದಲ್ಲಿ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ
ಅಫಜಲ್ಪುರ: ತಾಲೂಕಿನ ಮೂಲೆ ಮೂಲೆಗೂ ಸಂಚರಿಸಿ ಪಕ್ಷ ಕಟ್ಟುವ ಕಾರ್ಯ ಮಾಡಿದ್ದು, ಕ್ಷೇತ್ರದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ನಮ್ಮ ಪಕ್ಷದ ಬೆಂಬಲಕ್ಕಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಬಿಜೆಪಿಗೆ ಬರಲಿವೆ ಎಂದು ಮಾಜಿ ಸಚಿವ ಹಾಗೂ ಗುಲ್ಬರ್ಗ ಲೋಕಸಭಾ ಮೀಸಲು ಕ್ಷೇತ್ರದ ಅಭ್ಯರ್ಥಿ ರೇವುನಾಯಕ ಬೆಳಮಗಿ ಹೇಳಿದರು.
ಪಟ್ಟಣದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೇಲ್ವೆ ಮಂತ್ರಿ ಮಲ್ಲಿಕಾರ್ಜುನ ಖರ್ಗೆ ಅವರು ಕುತಂತ್ರದ ರಾಜಕೀಯ ಮಾಡುತ್ತಾ ಮತದಾರರ ದಿಕ್ಕು ತಪ್ಪಿಸುತ್ತ ದಿನಕ್ಕೊಂದು ಕಾರ್ಯಕ್ರಮಗಳನ್ನು ಬರಿ ಹೆಸರಿಗೆ ಮಾಡುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಅವರು ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡಿದರೆ, ಅವರಿಗೆ ಭಗವಂತ ದಾರಿ ತಪ್ಪಿಸುತ್ತಾನೆ ಎಂದರು.
ಖರ್ಗೆ ಕುತಂತ್ರ ನಡೆಯಲಿಲ್ಲ: ಗುಲ್ಬರ್ಗದಲ್ಲಿ ಮೋದಿ ರ್ಯಾಲಿಯಿದ್ದಾಗ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ವಾಡಿಗೆ ಕರೆಯಿಸಿ ಜನರು ಬಾರದಂತೆ ಕುತಂತ್ರ ಮಾಡಿದ್ದರು. ಆದರೂ ಸಾಕಷ್ಟು ಪ್ರಮಾಣದಲ್ಲಿ ಜನ ಬಂದು ಮೋದಿ ರ್ಯಾಲಿಯನ್ನು ಯಶಸ್ವಿಗೊಳಿಸಿದ್ದಾರೆ ಎಂದು ಹೇಳಿದರು.
ಮಾಜಿ ಶಾಸಕ ಎಂ.ವೈ.ಪಾಟೀಲ್ ಮಾತನಾಡಿ, ಈ ಬಾರಿ ಎಲ್ಲರೂ ಪಕ್ಷಾತೀತವಾಗಿ ಮೋದಿ ಅವರನ್ನು ಬೆಂಬಲಿಸಿದ್ದು ಈ ನಿಟ್ಟಿನಲ್ಲಿ ಬೆಳಮಗಿ ಅವರನ್ನು ಸಂಸದರನ್ನಾಗಿ ಮಾಡಲು ಯುವಕರು ತೀರ್ಮಾನಿಸಿದ್ದಾರೆ. ಹೀಗಾಗಿ ಅವರ ಗೆಲವು ಖಚಿತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೂತ್ ಮಟ್ಟಕ್ಕೆ ಆದ್ಯತೆ ಕೊಡಿ: ಪಕ್ಷಕ್ಕೆ ಸಷ್ಟ ಬಹುಮತ ನೀಡುವ ನಿಟ್ಟಿನಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ಒಗ್ಗಟ್ಟಾಗಿ ಶ್ರಮಿಸಬೇಕು. ಬೂತ್ ಮಟ್ಟದಲ್ಲಿ ಗೆದ್ದರೆ ಎಲ್ಲ ಕಡೆ ಜಯ ಸಾಧಿಸಿದ ಹಾಗೆ. ಹೀಗಾಗಿ ನಾವು ಬೂತ್ ಮಟ್ಟಕ್ಕೆ ಹೆಚ್ಚಿನ ಒತ್ತು ನೀಡಬೇಕು. ಅಂದಾಗಲೇ ಜಯ ನಮ್ಮದಾಗಲಿದೆ ಎಂದು ಪಕ್ಷದ ತಾಲೂಕಾಧ್ಯಕ್ಷ ರಮೇಶ ನೀಲಗಾರ ಹೇಳಿದರು.
ಈ ವೇಳೆ ಜಿಪಂ ಸದಸ್ಯ ಪ್ರಕಾಶ ಜಮಾದಾರ, ಅವ್ವಣ್ಣ ಮ್ಯಾಕೇರಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಜಿಪಂ ಸದಸ್ಯ ಸಿದ್ದಾರ್ಥ ಬಸರಿಗಿಡ, ಮಲ್ಲಿಕಾರ್ಜುನ ನಿಂಗದಳ್ಳಿ, ಪ್ರೇಮಕುಮಾರ ರಾಠೋಡ, ನಾಗಪ್ಪ ಆರೇಕರ, ಶರಣು ಕುಂಬಾರ, ಶೈಲೇಶ ಗುಣಾರಿ, ಪಪಂ ಸದಸ್ಯ ವಿನೋದ ರಾಠೋಡ, ಹಣಮಂತ ಬಾಳಪ್ಪ, ಅಶೋಕ ಹುಗಾರ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

